ಬೆಂಗಳೂರು,ಜುಲೈ,11,2025 (www.justkannada.in) : 2028ರಲ್ಲೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಮುಂದೆಯೂ ಸಿದ್ದರಾಮಯ್ಯ ಅವರೇ ಸಿಎಂ ಆಗ್ತಾರೆ ಅಂತಾ ನಾನು ಹೇಳುವುದಿಲ್ಲ. ಆದರೆ ಸಿದ್ದರಾಮಯ್ಯ ರಾಜಕೀಯದಲ್ಲಿ ಇರುತ್ತಾರೆ. 2028ರ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 2028ರ ಚುನಾವಣೆಯಲ್ಲಿ ಸಿದ್ದರಾಮಯ್ಯರದ್ದೇ ನಾಯಕತ್ವ ಎಂದರು.
ಸಿಎಂ ಬದಲಾವಣೆ ವಿಚಾರ. ನಿನ್ನೆ ಸಿಎಂ ಹೇಳಿದ ಮೇಲೆ ಮುಗಿತು. ಮತ್ತೆ ಚರ್ಚೆ ಮಾಡುವಂತಿಲ್ಲ. 2028ರವರೆಗೂ ಯಾವುದೇ ಚರ್ಚೆ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
Key words: Elections, 2028, leadership ,CM Siddaramaiah, Minister, Satish Jarkiholi