ನಾಳೆ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಜುಲೈ,17,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 18 (ನಾಳೆ)ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ.

ನಾಳೆ ಬೆಳಗ್ಗೆ 11 ಗಂಟೆಗೆ ಮೈಸೂರು ನಗರ (ಜಿಲ್ಲಾ) ಯುವ ಕಾಂಗ್ರೆಸ್ ಸಮಿತಿಗೆ ನೂತನವಾಗಿ ಆಯ್ಕೆಗೊಂಡಿರುವ ಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭ ಹಾಗೂ ನೂತನ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 03 ಗಂಟೆಗೆ ಕರ್ನಾಟಕ ಸರ್ಕಾರ ಆಡಳಿತ ತರಬೇತಿ ಸಂಸ್ಥೆ, ಮೈಸೂರು ಮತ್ತು ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ ಕರ್ನಾಟಕ ಪ್ರಾದೇಶಿಕ ಶಾಖೆ ಸಹಯೋಗದೊಂದಿಗೆ ಆಯೋಜಿಸಿರುವ “ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸುವುದು ಮತ್ತು ಒಟ್ಟು ಜಿಲ್ಲಾ ಉತ್ಪನ್ನವನ್ನು ಹೆಚ್ಚಿಸುವುದು” ಕುರಿತು ಕೆಎಎಸ್ ತಾಲ್ಲೂಕು ನೋಡಲ್ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಹಾಗೆಯೇ ಜುಲೈ 19 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.vtu

Key words: CM, Siddaramaiah, tour, Mysore, district, tomorrow