ಬೆಂಗಳೂರು,ಜುಲೈ,19,2025 (www.justkannada.in): ಜೂನ್ 4ರಂದು ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್.ಅಶೋಕ್ ಪತ್ರ ಬರೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಪ್ರಕರಣ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರ್.ಅಶೋಕ್, ಐಪಿಎಲ್ ವಿಜಯೋತ್ಸವದ ವೇಳೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಸಂಭವಿಸಿದ ದುರಂತದಲ್ಲಿ ಪ್ರಾಣ ಕಳೆದುಕೊಂಡ 11 ಅಮಾಯಕ ಯುವಕರ ಕುಟುಂಬದವರಿಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ.
ದುರಂತಕ್ಕೆ ಪೊಲೀಸ್ ಇಲಾಖೆಯೇ ಕಾರಣ ಎಂದು ಬಿಂಬಿಸುವ ಮೂಲಕ ಸರ್ಕಾರ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದ್ದು, ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸಲು ಈ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.
Key words: RCB, stampede, case , CBI, investigation, R. Ashok, letter, CM