ಮಡಿಕೇರಿ,ಜುಲೈ,25,2025 (www.justkannada.in): ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ದೇವರಕೊಲ್ಲಿಯಲ್ಲಿ ನಡೆದಿದೆ.
ನಿಹಾದ್, ರಿಝ್ವಾನ್, ರಾಖಿಬ್ ಮತ್ತು ರಿಶು ಮೃತಪಟ್ಟವರು. ಮೃತರು ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪದವರು ಎನ್ನಲಾಗಿದೆ. ನಾಲ್ವರು ಯುವಕರು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲಕ್ಕೆ ನಿನ್ನೆ ಕಾರಿನಲ್ಲಿ ತೆರಳಿದ್ದವರು ಅಲ್ಲಿಂದ ಇಂದು ವಾಪಸ್ಸಾಗುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಸ್ಥಳದಲ್ಲಿ ಇಬ್ಬರು ಮೃತಪಟ್ಟರೇ ಆಸ್ಪತ್ರೆಗೆ ಸಾಗಿಸುತ್ತಿರುವಾಗ ಮಾರ್ಗಮಧ್ಯೆ ಇಬ್ಬರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Key words: Four, death, horrific accident, car and lorry