ಕೆಸರೆ ನೀರು ಸಂಸ್ಕರಣಾ ಘಟಕ ಹಾಗೂ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಉಪ ಲೋಕಾಯುಕ್ತರ ಭೇಟಿ, ಪರಿಶೀಲನೆ

ಮೈಸೂರು ಆಗಸ್ಟ್,1,2025 (www.justkannada.in): ಇಂದು ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರು ಕೆಸರೆ ನೀರು ಸಂಸ್ಕರಣಾ ಘಟಕ ಹಾಗೂ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೊದಲು ಕೆಸರೆ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದ ಉಪ ಲೋಕಾಯುಕ್ತ ಫಣೀಂದ್ರ ನೀರು ಸಂಸ್ಕರಣಾ ಘಟಕದಲ್ಲಿ ಅಳವಡಿಸಿಕೊಂಡಿರುವ ವಿಧಾನ ಹಾಗೂ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಇಲ್ಲಿರುವ ಪ್ರದೇಶದಲ್ಲಿ  ಗಿಡ ಗಂಟೆಗಳನ್ನು ತೆರವುಗೊಳಿಸಿ ಹೂವಿನ ಹಾಗೂ ಉತ್ತಮ ಗಿಡಗಳನ್ನು ಹಾಕಿ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಪ್ರತಿ ಹಳ್ಳಿಗಳ ಕಡೆ ಸ್ವಚ್ಚತೆ ಆದ್ಯತೆ ನೀಡಬೇಕು. ಸ್ವಚ್ಚತೆಯ ಬಗ್ಗೆ ಜನರಲ್ಲಿಯೂ ಜಾಗೃತಿ ಮೂಡಿಸಬೇಕು. ಒಳ ಕಸ ಹಾಗೂ ಹಸಿ ಕಸದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಅದರಂತೆ ಸ್ವಚ್ಚತೆಗೆ ಸಾರ್ವಜನಿಕರಿಂದಲೂ ಅಗತ್ಯ ಸಹಕಾರ ನೀಡಬೇಕು ಎಂದು ತಿಳಿಸಿದರು.

ಕೆಸರೆ ಘನ ತ್ಯಾಜ್ಯ ಘಟಕಕ್ಕೆ ಭೇಟಿ- ವೈಜ್ಞಾನಿಕ ರೀತಿಯಲ್ಲಿ ತಜ್ಞರಿಂದ ತಪಾಸಣೆ ಮಾಡಿಸಿ

ನಂತರ ಉಪ ಲೋಕಾಯುಕ್ತರು ಕೆಸರೆ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಗ್ರಾಮದ ಜನರು ಮನವಿಯ ಮೇರೆಗೆ ವೈಜ್ಞಾನಿಕ ರೀತಿಯಲ್ಲಿ ತಜ್ಞರಿಂದ ತಪಾಸಣೆ ಮಾಡಿಸಿ 5 ಕಿ.ಮೀ ಒಳಗೆ ಯಾವುದಾದರೂ ಮನೆಯಲ್ಲಿನ ಜನರಿಗೆ ಆರೋಗ್ಯ ಸಮಸ್ಯೆ ಹಾಗೂ ಹೋಟೆಲ್ ಗಳಿಗೆ ಜನರಿಗೆ ತೊಂದರೆ ಆಗಿದ್ರೆ ಜಿಲ್ಲಾಧಿಕಾರಿಗಳು ಪರಿಶೀಲನೆ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಿದರು.

ಘನ ತ್ಯಾಜ್ಯ ನಿರ್ವಹಣಾ ಘಟಕದಿಂದ  500 ಮೀ ಒಳಗೆ ನಿವೇಶನಗಳು ಇದ್ದರೆ ರದ್ದು ಪಡಿಸುವ ಕೆಲಸ ಮಾಡಲಾಗುವುದು. ಇದರಿಂದ ಮಕ್ಕಳಿಗೆ ಹಾಗೂ ಜನರಿಗೆ ವಾಸನೆಯಿಂದ ಆರೋಗ್ಯದಲ್ಲಿ ಸಮಸ್ಯೆ ಆಗುವ ಬಗ್ಗೆ ಪರಿಶೀಲನೆ ಮಾಡಿಸಿ.. ಮುನ್ನೇಚರಿಕೆ ಕ್ರಮವಾಗಿ ಜನರಿಗೆ ಘಟಕದಿಂದ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತರಾದ ಶೇಕ್ ತನ್ವಿರ್ ಆಸಿಫ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಎಂಜಿನಿಯರ್‌ ಆಸಿಫ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.vtu

Key words: Deputy Lokayukta, visits ,inspects, solid waste management unit, Mysore