ಮೈಸೂರು,ಆಗಸ್ಟ್,2,2025 (www.justkannada.in): ಸಾಮಾಜಿಕ ಬಹಿಷ್ಕಾರ ಮತ್ತು ಮಾನಕ್ಕೆ ಅಂಜಿ ಗ್ರಾಮ ಪಂಚಾಯತಿ ಸದಸ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಡಕನಹಳ್ಳಿ ಹುಂಡಿಯಲ್ಲಿ ಈ ಘಟನೆ ನಡೆದಿದೆ. 60 ವರ್ಷದ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತಿ ಸದಸ್ಯ. ಘಟನೆಗೆ ಸಂಬಂಧಿಸಿದಂತೆ 6 ಜನರ ವಿರುದ್ಧ ದೂರು ದಾಖಲಾಗಿದೆ.
ಜಮೀನು ವಿಚಾರದಲ್ಲಿ ಪಕ್ಕದ ಮನೆಯವರು ಬೆದರಿಕೆ ಹಾಕಿದ್ದಾರೆ ಎಂಬ ಆರೋಪ, ಸಮುದಾಯದಿಂದ ಬಹಿಷ್ಕಾರ ಹಿನ್ನಲೆಯಲ್ಲಿ ಮಾನಕ್ಕೆ ಅಂಜಿ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ನ್ಯಾಯಕ್ಕಾಗಿ ಹೆಂಡತಿ ಅಂಗಲಾಚಿದ್ದು, ಆಕ್ರಂದನ ಮುಗಿಲು ಮುಟ್ಟಿದೆ.
ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಡಿವೈಎಸ್‌ಪಿ ರಘು, ಇನ್ಸ್‌ಪೆಕ್ಟರ್ ಸುನಿಲ್ ಸೇರಿದಂತೆ ಇತರೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Key words: Gram panchayath, member, suicide