ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ ಪ್ರಕರಣ: ಇಬ್ಬರ ಬಂಧನ

ಬೆಂಗಳೂರು,ಆಗಸ್ಟ್,2,2025 (www.justkannada.in):  ನಟಿ ರಮ್ಯಾ ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಬ್ಬರನ್ನ ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣ ಸಂಬಂಧ ಸಿಸಿಬಿ  ಪೊಲೀಸರು ಬಳ್ಳಾರಿ ಮೂಲದ ಓರ್ವ, ಚಿತ್ರದುರ್ಗ ಮೂಲದ ಓರ್ವನ ಬಂಧಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್, ರಮ್ಯಾ ಅವರಿಗೆ  ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ್ದ ಪ್ರಕರಣದಲ್ಲಿ ಇಬ್ಬರನ್ನ ಅರೆಸ್ಟ್ ಮಾಡಲಾಗಿದೆ. ಸಿಸಿಬಿ ಪೊಲೀಸರು 13 ಜನರ ಐಡೆಂಟಿಟಿ ಮಾಹಿತಿ ಕಲೆ ಹಾಕಿದ್ದರು.  ಈ ಪೈಕಿ ಇಬ್ಬರನ್ನ  ಬಂಧನ ಮಾಡಲಾಗಿದೆ. ಅರೆಸ್ಟ್ ಮಾಡಿದವರನ್ನ ವಿಚಾರಣೆ ಮಾಡಲಾಗುತ್ತದೆ. ನೇರವಾಗಿ ಅವರ ಅಕೌಂಟ್ ನಿಂದಲೇ ಕಾಮೆಂಟ್ ಮಾಡಿದ್ದರು.   ಸಾಮಾಜಿಕ ಜಾಲತಾಣಗಳಲ್ಲಿ  ಅಸಭ್ಯ ಕಮೆಂಟ್ ಮಾಡಿದ್ರೆ ಕೇಸ್ ದಾಖಲಿಸಿ ಅರೆಸ್ಟ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾ ಸೈಬರ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲು ಮಾಡಿದ್ದರು. ಈ ಪ್ರಕರಣದಲ್ಲಿ ತ್ವರಿತ ಕ್ರಮ ಕೈಗೊಂಡಿರುವ ಪೊಲೀಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.vtu

Key words: Two, arrested , obscene, comments ,actress Ramya