ಶ್ರಮಿಕ ತಾತ್ಕಾಲಿಕ ವಸತಿ ಕಟ್ಟಡ ಉದ್ಘಾಟನೆ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿದ ಸಚಿವ ಸಂತೋಷ್ ಲಾಡ್

ಚಾಮರಾಜನಗರ,ಆಗಸ್ಟ್,6,2025 (www.justkannada.in): ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿಯಿಂದ ವಲಸೆ ಕಟ್ಟಡ ಕಾರ್ಮಿಕರಿಗೆ ಮತ್ತು ಅವರ ಕುಟುಂಬದವರಿಗೆ ಅನುಕೂಲ ಕಲ್ಪಿಸಲು ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶ, ಚಾಮರಾಜನಗರ ತಾಲೂಕು,ಬದನಕುಪ್ಪೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ ಕಟ್ಟಡವನ್ನು ಇಂದು ಕಾರ್ಮಿಕ ಸಚಿವ ಸಂತೋಷ್ ಲಾಡ್  ಉದ್ಘಾಟನೆ ಮಾಡಿದರು.

ನಂತರ ಚಾಮರಾಜನಗರ ಜಿಲ್ಲೆಯ ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ  ಮಾಡಿ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಲಾಡ್ ಪಾಲ್ಗೊಂಡಿದ್ದರು.

ಈ ಕಾರ್ಯಕ್ರಮದಲ್ಲಿ  ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನ ರೋಥ್, ಪೊಲೀಸ್ ವರಿಷ್ಠಾಧಿಕಾರಿ ಕವಿತಾ,  ಎಂ ಎಸ್ ಐ ಎಲ್ ಅಧ್ಯಕ್ಷರು ಹಾಗೂ ಶಾಸಕ ಪುಟ್ಟರಂಗಶೆಟ್ಟಿ, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್,  ಡಿಸಿಸಿ, ಚಾಮರಾಜನಗರ ಅಧ್ಯಕ್ಷ ಮರಿಸ್ವಾಮಿ ಕಾರ್ಮಿಕ ಸಂಘಟನೆಯ  ಮಹೇಶ್, ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ, ಕಾರ್ಮಿಕ ಆಯುಕ್ತ ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತ, ರವಿಕುಮಾರ್ ಉಪ ಕಾರ್ಮಿಕ ಆಯುಕ್ತ ಸೋಮಣ್ಣ, ಜಂಟಿ ಕಾರ್ಯದರ್ಶಿ ಉಮೇಶ್, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರು, ಮುಂಡರಗಿ ನಾಗರಾಜ್ ಲಿಡ್ಕರ್ ನಿಗಮದ ಅಧ್ಯಕ್ಷರು, ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು, ಸಾವಿರಾರು ಕಾರ್ಮಿಕರು, ಫಲಾನುಭವಿಗಳು, ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Key words: Minister, Santosh Lad, distributes, smart cards , workers, Chamarajanagar