ಬೆಂಗಳೂರು,ಆಗಸ್ಟ್,8,2025 (www.justkannada.in): ನಗರದ ಕೆಂಗೇರಿ ರಿಂಗ್ ರೋಡ್ ನಲ್ಲಿರುವ ಸಾಹಸ ಸಿಂಹ, ನಟ ಡಾ. ವಿಷ್ಣುವರ್ಧನ್ ಸಮಾಧಿಯನ್ನ ರಾತ್ರೋರಾತ್ರಿ ನೆಲಸಮ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೌದು, ಹೈಕೋರ್ಟ್ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿ ತೆರವುಗೊಳಿಸಲಾಗಿದ್ದು ಇದೀಗ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಭಿಮಾನ್ ಸ್ಟುಡಿಯೋ ಬಳಿ ಅಭಿಮಾನಿಗಳು ಜಮಾವಣೆಗೊಂಡಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಕೆಂಗೇರಿ ಠಾಣಾ ಪೊಲೀಸರಿಂದ ಬಿಗಿ ಭದ್ರತೆ ವಹಿಸಲಾಗಿದೆ.
ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲಾದ ಹಿನ್ನೆಲೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿ ತೆರವುಗೊಳಿಸಲಾಗಿದೆ. ಮೈಸೂರಿನಲ್ಲಿ ಒಟ್ಟು 2.75 ಎಕರೆ ಪ್ರದೇಶದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲಾಗಿದೆ.
ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ ಹಿನ್ನೆಲೆಯಲ್ಲಿ ಬೇಸರ ವ್ಯಕ್ತಪಡಿಸಿರುವ ನಿರ್ದೇಶಕ ರವಿ ಶ್ರೀವತ್ಸ. ಜಾಗದ ವಿಚಾರವಾಗಿ ವಾಗ್ವಾದ ನಡೆಯುತ್ತಿತ್ತು. ಬಾಲಣ್ಣ ಕುಟುಂಬ ಹಾಗೂ ವಿಷ್ಣುವರ್ಧನ್ ಅವರ ಫ್ಯಾನ್ಸ್ ನಡುವೆ ವಾಗ್ವಾದ ನಡೆಯುತ್ತಿತ್ತು. ಇತ್ತೀಚಿನ ವರ್ಷಗಳಲ್ಲಿ ಪುಣ್ಯಸ್ಮರಣೆಗೂ ಅವಕಾಶ ನೀಡಿರಲಿಲ್ಲ. ಇದೀಗ ರಾತ್ರೋರಾತ್ರಿ ಸಮಾಧಿ ನೆಲಸಮ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
Key words: Actor, Dr. Vishnuvardhan, tomb, demolished