ಕೆ.ಎನ್ ರಾಜಣ್ಣ ರಾಜೀನಾಮೆ ಕೊಟ್ಟಿಲ್ಲ, ಸಂಪುಟದಿಂದ ವಜಾ- ಶಾಸಕ ಶಿವಲಿಂಗೇಗೌಡ

ಬೆಂಗಳೂರು,ಆಗಸ್ಟ್,11,2025 (www.justkannada.in):   ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ. ಸಂಪುಟದಿಂದಲೇ ಅವರನ್ನ ವಜಾಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಮಾತನಾಡಿರುವ ಕಾಂಗ್ರೆಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ಅವರು,  ಕೆ.ಎನ್ ರಾಜಣ್ಣ ಅವರು ರಾಜೀನಾಮೆ ಕೊಟ್ಟಿಲ್ಲ. ಅವರನ್ನು ಸಚಿವ  ಸಂಪುಟದಿಂದ ವಜಾ ಮಾಡಲಾಗಿದೆ. ವರಿಷ್ಠರ ಸೂಚನೆ ಮೇರೆಗೆ ಸಂಪುಟದಿಂದ ಕೈ ಬಿಡಲಾಗಿದೆ ಎಂದರು.

ಕೆ.ಎನ್ ರಾಜಣ್ಣ ಸೆಪ್ಟಂಬರ್ ನಲ್ಲಿ ಕ್ರಾಂತಿ ಆಗುತ್ತೆ ಎಂದಿದ್ದರು. ಆದರೆ ಈಗಲೇ ಕ್ರಾಂತಿ ಆಗಿದೆ ಎಂದು ಶಾಸಕ ಕೆಎಂ ಶಿವಲಿಂಗೇಗೌಡ ಹೇಳಿದರು.

Key words:  KN Rajanna, not resigned, Dismiss, MLA, Shivalinga Gowda