ಆ.15ರಿಂದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇಗುಲಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

ಬೆಂಗಳೂರು,ಆಗಸ್ಟ್,13,2025 (www.justkannada.in): ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇಗುಲಗಳಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

ಇಂದು ವಿಧಾನಪರಿಷತ್ ನಲ್ಲಿ ಎಂಎಲ್ ಸಿ ಮಧು ಮಾದೇಗೌಡ ಅವರು ಕೇಳಿದ ಪ್ರಶ್ನಗೆ ಉತ್ತರಿಸಿದ ಸಚಿವ ರಾಮಲಿಂಗರೆಡ್ಡಿ, ಆಗಸ್ಟ್  15ರಿಂದ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ  ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.  ದೇವಸ್ತಾನದ ಆವರಣದ ಸ್ವಚ್ಚತೆ ಕಾಪಾಡಲು ಪರಿಣಾಮಕಾರಿಯಾಗಿ  ಪ್ಲಾಸ್ಟಿಕ್ ಬಳಕೆ ನಿಷೇಧಿಸಲು ಸೂಚಿಸಲಾಗಿದೆ ಎಂದರು.

ನಿಯಮ ಉಲ್ಲಂಘಿಸಿರುವುದು ಕಂಡು ಬಂದರೆ ದಂಡ ವಿಧಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದೇವಾಲಯ ಪ್ಲಾಸ್ಟಿಕ್ ಉತ್ಪನ್ನ ಕಂಡು ಬಂದರೆ ಅಂಥವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು.

Key words: Complete, ban, plastic, temples, Minister Ramalingareddy