ಬೆಂಗಳೂರು,ಆಗಸ್ಟ್,14,2025 (www.justkannada.in): ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಧರ್ಮಸ್ಥಳದ ವಿಷಯದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ನಾನು ಹೇಳಲ್ಲ . ಧರ್ಮಸ್ಥಳ ಕೇಸ್ ನಲ್ಲಿ ಏನು ಇಲ್ಲ . ಧರ್ಮಸ್ಥಳದವರಿಗೆ ಅನ್ಯಾಯವಾಗಿದೆ. ಈ ನಿಟ್ಟಿನಲ್ಲಿ ಸತ್ಯಾಸತ್ಯತೆ ಹೊರಬರಬೇಕೆಂದು ತನಿಖೆ ನಡೆಸಲಾಗುತ್ತಿದೆ ಎಂದರು.
ದೂರುದಾರ ಕೋರ್ಟ್ ನಲ್ಲಿ ಹೇಳಿಕೆ ನೀಡಿದ್ದಾನೆ. ಈ ನಿಟ್ಟಿನಲ್ಲಿ ಆಳವಾಗಿ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಿಎಂ ಸಿದ್ದರಾಮಯ್ಯ ಕೂಡ ನಿರ್ಧಾಕ್ಷಿಣ್ಯ ಕ್ರಮ ಆಗಬೇಕು ಎಂದು ಹೇಳಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
Key words: big, conspiracy , Dharmasthala case, DCM, D.K. Shivakumar