Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆಗಸ್ಟ್ 18,2025 (www.justkannada.in):  ಬೆಂಗಳೂರಿನ ಹೆಬ್ಬಾಳ ನೂತನ ಮೇಲ್ಸೆತುವೆಯನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.

ಬೆಂಗಳೂರಿನ ಹೆಬ್ಬಾಳ ಜಂಕ್ಷನ್‌ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ವೃತ್ತ ಸಂಪರ್ಕಿಸುವ ನೂತನ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ  ಲೋಕಾರ್ಪಣೆಗೊಳಿಸಿದರು.

ನಂತರ ಮಾತನಾಡಿದ ಅವರು,  ಬೆಂಗಳೂರಿನ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಬದ್ಧತೆ ಇಟ್ಟುಕೊಂಡಿರುವ ನಮ್ಮ ಸರ್ಕಾರವು ಮೇಲ್ಸೇತುವೆಗಳು, ಮೆಟ್ರೋ ಕಾಮಗಾರಿಗಳು ಸೇರಿದಂತೆ ಪ್ರಯಾಣಿಕರಿಗೆ ಸಿಗ್ನಲ್ ಫ್ರೀ ಸಂಚಾರ ವ್ಯವಸ್ಥೆ ಕಲ್ಲಿಸಿಕೊಡಲು ಶಕ್ತಿಮೀರಿ ಶ್ರಮಿಸುತ್ತಿದೆ ಎಂದರು.

80 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಫ್ಲೈಓವರ್ ಸುಮಾರು 700 ಮೀಟರ್ ಉದ್ದವಿದೆ. ಕಾರ್ಯಕ್ರಮದ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಭೈರತಿ ಸುರೇಶ್, ಕೃಷ್ಣಭೈರೇಗೌಡ ಶಾಸಕರಾದ ಎಸ್ ಆರ್ ವಿಶ್ವನಾಥ್ , ಹ್ಯಾರಿಸ್ ಉಪಸ್ಥಿತರಿದ್ದರು.

Key words: CM Siddaramaiah, inaugurates, new, Hebbal, flyover