ಉಪರಾಷ್ಟ್ರಪತಿ ಚುನಾವಣೆ: INDIA  ಅಭ್ಯರ್ಥಿಯಾಗಿ ನಿವೃತ್ತ ನ್ಯಾ.ಸುದರ್ಶನ್ ರೆಡ್ಡಿ ಆಯ್ಕೆ

ನವದೆಹಲಿ,ಆಗಸ್ಟ್,19,2025 (www.justkannada.in):  ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದ್ದು ಇಂಡಿಯಾ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಆಯ್ಕೆಯಾಗಿದ್ದಾರೆ.

ದೆಹಲಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ನಿವೃತ್ತ ನ್ಯಾ. ಸುದರ್ಶನ್ ರೆಡ್ಡಿ ಅವರ ಹೆಸರನ್ನ ಪ್ರಕಟಿಸಿದರು.

ನಿವೃತ್ತ ನ್ಯಾ. ಸುದರ್ಶನ್ ರೆಡ್ಡಿ ಅವರು 2007ರಿಂದ 2011ರವರೆಗೆ  ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಮಹಾರಾಷ್ಟ್ರ ರಾಜ್ಯಪಾಲ ಮತ್ತು ಆರ್‌ಎಸ್‌ಎಸ್ ಹಿನ್ನಲೆಯ  ಸಿ.ಪಿ. ರಾಧಾಕೃಷ್ಣನ್ ಅವರನ್ನು ಉಪ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ.

ಜುಲೈ 21 ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ಅವರು ಅನಾರೋಗ್ಯ ಕಾರಣಗಳನ್ನು ನೀಡಿ ರಾಜೀನಾಮೆ ನೀಡಿದ್ದರು. ಸೆಪ್ಟಂಬರ್ 9 ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನಾಂಕವಾಗಿದೆ.

Key words: Vice-Presidential, Election, INDIA candidate. Retired Justice, Sudarshan Reddy