ಬೆಂಗಳೂರು,ಆಗಸ್ಟ್,21,2025 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಸ್ ಹರಿದು 11 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಯಲಹಂಕದ ಕೋಗಿಲು ಕ್ರಾಸ್ ಮಾರುತಿ ನಗರದಲ್ಲಿ ಈ ಘಟನೆ ನಡೆದಿದೆ. 11 ವರ್ಷದ ತನ್ವೀರ್ ಮೃತಪಟ್ಟ ಬಾಲಕ. ತನ್ವೀರ್ ಖಾಸಗಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ. ಈ ನಡುವೆ ಬೈಕ್ ನಲ್ಲಿ ಪೋಷಕರ ಜೊತೆ ತನ್ವೀರ್ ಶಾಲೆಗೆ ತೆರಳುತ್ತಿದ್ದನು. ಈ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದು ಬಸ್ ಚಕ್ರಕ್ಕೆ ಸಿಲುಕಿ ತನ್ವೀರ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಬೆಳಿಗ್ಗೆ 8.30ರ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಯಲಹಂಕ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.
Key words: 11-year, old boy, Dies, BMTC, bus