ಬೆಂಗಳೂರು,ಆಗಸ್ಟ್,21,2025 (www.justkannada.in): ಧರ್ಮಸ್ಥಳದ ವಿರುದ್ದ ಅಪಪ್ರಚಾರ ಖಂಡಿಸಿ ಬಿಜೆಪಿಯಿಂದ ಮುಂದಿನ 1 ವಾರ ಹೋರಾಟಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಪ್ರಕರಣ ಕುರಿತು ಎಸ್ ಐಟಿ ರಚನೆ ಮಾಡಿದ್ದಾಗ ಸ್ವಾಗತ ಮಾಡಿದವು. ಆದರೆ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದವರ ವಿರುದ್ದ ಸರ್ಕಾರ ಕ್ರಮ ಕೈಗೊಂಡಿಲ್ಲ. ಧರ್ಮಸ್ಥಳದ ವಿರುದ್ದ ವ್ಯವಸ್ಥಿತ ಷಡ್ಯಂತ್ರ ನಡೆದಿದೆ. ಷಡ್ಯಂತ್ರ ಹಿಂದಿರುವವರನ್ನ ಪತ್ತೆ ಮಾಡಿಲ್ಲ ಎಂದರು.
ಧರ್ಮಸ್ಥಳದ ಬಗ್ಗೆ ಅಪಪ್ರಚಾರದ ವಿರುದ್ದ ಹೋರಾಟ ಮಾಡುತ್ತೇವೆ. ಮುಂದಿನ 1 ವಾರ ಹೋರಾಟಕ್ಕೆ ನಿರ್ಧಾರ ಮಾಡಿದ್ದು 224 ಕ್ಷೇತ್ರಗಳಲ್ಲಿ ಹೋರಾಟ ನಡೆಯಲಿದೆ. ನಾಳೆಯಿಂದ ಧರ್ಮದ ಉಳಿವಿಗಾಗಿ ಧರ್ಮಯುದ್ದ ನಡೆಯಲಿದೆ ಎಂದರು.
Key words: Dharmasthala case, fight, BJP, BY Vijayendra