AIISH ವಜ್ರಮಹೋತ್ಸವ: ರಾಷ್ಟ್ರಪತಿ ಕಾರ್ಯಕ್ರಮಕ್ಕೆ ಮೀಡಿಯಾಗಿಲ್ಲ ಪ್ರವೇಶ..

ಮೈಸೂರು,ಆಗಸ್ಟ್,21,2025 (www.justkannada.in): ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಸೆಪ್ಟಂಬರ್ 1 ರಂದು ನಡೆಯಲಿರುವ ಸಿಲ್ವರ್ ಜ್ಯುಬಿಲಿ(ವಜ್ರ ಮಹೋತ್ಸವ) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಲಿದ್ದು ಈ ಕಾರ್ಯಕ್ರಮಕ್ಕೆ ಮಾಧ್ಯಮದವರಿಗೆ ಅವಕಾಶವಿಲ್ಲ.

ಹೌದು ರಾಷ್ಟ್ರಪತಿಗಳ ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಸ್ಧಳದ ಅವಕಾಶ ಕಡಿಮೆ ಇರುವುದರಿಂದ ಮಾಧ್ಯಮದವರಿಗೆ ಕಾರ್ಯಕ್ರಮಕ್ಕೆ ಅವಕಾಶ ಇರುವುದಿಲ್ಲ. ಕಾರ್ಯಕ್ರಮದ ನೇರ ಪ್ರಸಾರದ Live link  ಅನ್ನು  ಮಾಧ್ಯಮದವರಿಗೆ ನೀಡಲಾಗುವುದು. ಮಾಧ್ಯಮಗಳ ಸಹಕರಿಸುವಂತೆ ಜಿಲ್ಲಾಡಳಿತ ಕೋರಿದೆ.

ಈ ನಡುವೆ ಇಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು  ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರ ವಹಿಸಬೇಕು. ರಾಷ್ಟ್ರಪತಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವ ಜೊತೆಯಲ್ಲಿ ಯಾವುದೇ ಅಸುರಕ್ಷತಾ ಘಟನೆಗಳಿಗೆ ಅವಕಾಶ ನೀಡಬಾರದು ಎಂದು ಸೂಚಿಸಿದ್ದಾರೆ.

Key words: AIISH, President’s,  program, No entry, Media