ನವದೆಹಲಿ,ಆಗಸ್ಟ್,22,2025 (www.justkannada.in): ಬೀದಿ ನಾಯಿಗಳಿಗೆ ಲಸಿಕೆ, ಸಂತಾನ ಹರಣ ಚಿಕಿತ್ಸೆ ಮಾಡಿಸಿ ಬಳಿಕ ಹೊರಗೆ ಬಿಡಬಹುದು. ಆಕ್ರಮಣಕಾರಿ ಬೀದಿನಾಯಿಗಳನ್ನು ಮಾತ್ರ ಆರೈಕೆ ಕೇಂದ್ರಗಳಿಗೆ ಸ್ಥಳಾಂತರ ಮಾಡಿ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.
ಬೀದಿನಾಯಿಗಳ ಕುರಿತ ಸುಪ್ರೀಂಕೋರ್ಟ್ ಆದೇಶದಲ್ಲಿ ಮಾರ್ಪಾಡು ಮಾಡಲಾಗಿದೆ. ದೆಹಲಿ ಹಾಗೂ ಎನ್‌ಸಿಆರ್ ನಲ್ಲಿ ಬೀದಿ ನಾಯಿಗಳ ಕಾಟ ವಿಪರೀತವಾಗಿದೆ ಎಂದು ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ದೆಹಲಿ-ಎನ್‌ಸಿಆರ್ ನ ಸುತ್ತಮುತ್ತಲಿನಲ್ಲಿ ಬೀದಿ ನಾಯಿಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಕೆಲ ದಿನಗಳ ಹಿಂದೆ ನಿರ್ದೇಶಿಸಿತ್ತು.
ಆಕ್ರಮಣಕಾರಿ ನಡವಳಿಕೆಯನ್ನು ಪ್ರದರ್ಶಿಸುವ ಅಥವಾ ರೇಬೀಸ್ ಸೋಂಕಿಗೆ ಒಳಗಾದ ನಾಯಿಗಳಿಗೆ ಮೊದಲು ಲಸಿಕೆ ಹಾಕಬೇಕು. ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಮೂವರು ನ್ಯಾಯಮೂರ್ತಿಗಳ ಪೀಠ ಹೇಳಿದೆ.
ಆರೈಕೆ ಕೇಂದ್ರಗಳಲ್ಲಿ ನಾಯಿಗಳನ್ನು ಕೂಡಿಹಾಕುವಂತಿಲ್ಲ. ಆಕ್ರಮಣಕಾರಿ ನಾಯಿಗಳನ್ನು ಮಾತ್ರ ಶೆಲ್ಟರ್ ಗಳಲ್ಲಿ ಇಡಬೇಕು. ಸಾರ್ವಜನಿಕವಾಗಿ ನಾಯಿಗಳಿಗೆ ಆಹಾರ ಹಾಕಬಾರದು ನಿರ್ದಿಷ್ಟ ಸ್ಥಳದಲ್ಲಿ ಆಹಾರ ಹಾಕಬೇಕು , ನಾಯಿಯನ್ನು ಹಿಡಿದು ಸಂತಾನ ಹರಣ ಶಸ್ತ್ರಚಿಕಿತ್ಸೆ ನೀಡಬೇಕು. ಪ್ರಾಣಿಪ್ರಿಯರು ಶ್ವಾನಗಳನ್ನು ದತ್ತುಪಡೆಯಬೇಕು ಎಂದು ಸುಪ್ರೀಂಕೋರ್ಟ್ ಕೆಲ ನಿರ್ದೇಶನಗಳನ್ನು ನೀಡಿದೆ.
Key words: aggressive, stray dogs, Supreme Court, orders