ಬೆಂಗಳೂರು,ಆಗಸ್ಟ್,22,2025 (www.justkannada.in): ವಿಧಾನಸಭೆ ಕಲಾಪದ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಆರ್‌ಎಸ್‌ಎಸ್ ನ ‘ನಮಸ್ತೇ ಸದಾ ವತ್ಸಲೇ’ ಗೀತೆ ಹಾಡಿ ಗಮನ ಸೆಳೆದಿದ್ದಾರೆ.
ವಿಧಾನಸಭೆಯಲ್ಲಿ ಆರ್ಸಿಬಿ ವಿಜಯೋತ್ಸವ ಕಾಲ್ತುಳಿತ ಘಟನೆ ಕುರಿತು ಚರ್ಚೆ ನಡೆಯುತ್ತಿರುವಾಗ ಡಿಸಿಎಂ ಡಿಕೆ ಶಿವಕುಮಾರ್ ಈ ಗೀತೆ ಹಾಡಿದ್ದಾರೆ. ಸದ್ಯ ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ವಿಪಕ್ಷ ನಾಯಕ ಆರ್. ಅಶೋಕ್ ಕಾಲ್ತುಳಿತ ದುರಂತದ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು, ಶಿವಕುಮಾರ್ ಅವರ ಪಾತ್ರವನ್ನು ನೇರವಾಗಿ ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ , ಆರ್‌ಎಸ್‌ಎಸ್ ಗೀತೆಯನ್ನು ಪಠಿಸುವ ಮೊದಲು ವಿರೋಧ ಪಕ್ಷವು ಹಳೆಯ ವಾದಗಳನ್ನು ಪುನರಾವರ್ತಿಸುತ್ತಿದೆ ಎಂದು ಆರೋಪಿಸಿದರು.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ವಿವಿಧ ರಾಜಕೀಯ ಪಕ್ಷಗಳ ಹಾಗೂ ಸಂಘಟನೆಗಳ ಬಗ್ಗೆ ಅಧ್ಯಯನ ಮಾಡಿದ್ದೇನೆ. ಕಮ್ಯುನಿಸ್ಟ್ ಪಕ್ಷ, ಜನತಾ ದಳ ಮತ್ತು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಬಗ್ಗೆಯೂ ತಿಳಿದುಕೊಂಡಿದ್ದೇನೆ. ಪ್ರತಿಯೊಂದು ಪಕ್ಷದಲ್ಲೂ, ಸಂಘಟನೆಯಲ್ಲೂ ಒಳ್ಳೆಯ ಮತ್ತು ಕೆಟ್ಟ ಗುಣಗಳಿರುತ್ತವೆ. ಒಳ್ಳೆಯದನ್ನು ಸ್ವೀಕರಿಸಬೇಕು ಎಂದು ಹೇಳಿದ್ದಾರೆ.
Key words: DCM, DK Shivakumar, RSS, song , Assembly