ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬಂಧಿಸಿದ ED

ಬೆಂಗಳೂರು,ಆಗಸ್ಟ್,23,2025 (www.justkannada.in): ಅಕ್ರಮವಾಗಿ ಆನ್‌ ಲೈನ್ ಮತ್ತು ಆಫ್‌ ಲೈನ್ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.

ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣ ವಿಚಾರವಾಗಿ ದಾಳಿ ಮಾಡಿದ ಇಡಿ ಅಧಿಕಾರಿಗಳು  ಇದೀಗ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಬಂಧಿಸಿದ್ದಾರೆ . ಸತತ 18 ಗಂಟೆಗೂ ಹೆಚ್ಚು ಕಾಲ ಪರಿಶೀಲಿಸಿದ ಇಡಿ ಅಧಿಕಾರಿಗಳು, ಕೆ.ಸಿ.ವೀರೇಂದ್ರ ಪಪ್ಪಿ ಮನೆಯಲ್ಲಿ ಕೋಟ್ಯಂತರ ರೂ ನಗದು, ವಿದೇಶಿ ಕರೆನ್ಸಿ ಸೇರಿದಂತೆ ಚಿನ್ನಾಭರಣ ಮತ್ತು ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ವೀರೇಂದ್ರ ಪಪ್ಪಿ ನಿವಾಸ ನಿನ್ನೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಪರಿಶೀಲನೆ ವೇಳೆ 1 ಕೋಟಿ ರೂ ವಿದೇಶಿ ಕರೆನ್ಸಿ ಸೇರಿದಂತೆ ಸುಮಾರು 12 ಕೋಟಿ ರೂ ನಗದು ಪತ್ತೆ ಆಗಿದೆ ಎನ್ನಲಾಗಿದೆ. 6 ಕೋಟಿ ರೂ. ಮೌಲ್ಯದ ಚಿನ್ನ, ಸುಮಾರು 10 ಕೆಜಿ ಬೆಳ್ಳಿ, 4 ವಾಹನಗಳು, 17 ಬ್ಯಾಂಕ್ ಅಕೌಂಟ್ಸ್ ಮತ್ತು 2 ಲಾಕರ್ ಜಪ್ತಿ ಮಾಡಲಾಗಿದೆ ಎನ್ನಲಾಗಿದೆ.

ಸಿಕ್ಕಿಂನ ಗ್ಯಾಂಗ್ಟಕ್ ನಲ್ಲಿ  ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನ  ಬಂಧಿಸಲಾಗಿದ್ದು, ಸಿಕ್ಕಿಂ ನ್ಯಾಯಾಲಯಕ್ಕೆ ಹಾಜರು ಪಡಿಸಿ ಟ್ರಾನ್ಸಿಟ್ ವಾರೆಂಟ್ ಮೇಲೆ ಇಂದು ರಾತ್ರಿ ಬೆಂಗಳೂರಿಗೆ ಇಡಿ ಅಧಿಕಾರಿಗಳು ಕರೆತರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: ED, arrested, Congress MLA, Virender Puppy