Sunday, October 25, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Front Page ದಸರಾ ಆಚರಣೆಯಲ್ಲಿ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಿ- DC ಲಕ್ಷ್ಮೀಕಾಂತ...

ದಸರಾ ಆಚರಣೆಯಲ್ಲಿ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಿ- DC ಲಕ್ಷ್ಮೀಕಾಂತ ರೆಡ್ಡಿ

ಮೈಸೂರು ಅಗಸ್ಟ್, 26,2025 (www.justkannada.in): ಜನ ಸಂದಣಿ ಇರುವ ಪ್ರದೇಶಗಳಲ್ಲಿ ಯಾವುದೇ ಅವಘಡಗಳು ಸಂಬಂಧಿಸಿದಂತೆ ತಡೆಯಲು ಪ್ರಮಾಣಿತ ಕಾರ್ಯಾಚರಣೆ ವಿಧಾನ (sop) ಪಾಲನೆಯನ್ನು ಸಂಬಂಧಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳು ಪಾಲನೆ ಮಾಡಬೇಕು ಎಂದು ಮೈಸೂರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜನ ಸಂದಣಿ ನಿರ್ವಹಣೆಗೆ ಸಂಬಂಧಿಸಿದಂತೆ ಪ್ರಮಾಣಿತ ಕಾರ್ಯಾಚರಣೆ ವಿಧಾನ (sop) ಕುರಿತಂತೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಡಿಸಿ ಲಕ್ಷ್ಮೀಕಾಂತರೆಡ್ಡಿ ಅವರು ಮಾತನಾಡಿದರು. ದಸರಾ ಆಚರಣೆ ಯುವ ಸಂಭ್ರಮ, ಯುವ ದಸರಾ, ಅರಮನೆ ಕಾರ್ಯಕ್ರಮಗಳು, ವಸ್ತು ಪ್ರದರ್ಶನ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನ ಸೇರುತ್ತಾರೆ. ಈ ಪ್ರದೇಶಗಳಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಸರಾ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ, ಸಮಯ, ಕಾರ್ಯಕ್ರಮದ ವಿವರಗಳ ಮಾಹಿತಿಯನ್ನು ಆಗಾಗ್ಗೆ ಸಾರ್ವಜನಿಕರಿಗೆ ನೀಡಬೇಕು. ಜನಸಂದಣಿ ಆಗದಂತೆ ಅಗತ್ಯ ಸೂಚನೆಗಳನ್ನು ಆಗಾಗ್ಗೆ ಸಾರ್ವಜನಿಕರಿಗೆ ನೀಡುತ್ತಿರಬೇಕು. ಜನಸಂದಣಿ ಇರುವ ಪ್ರದೇಶಗಳಲ್ಲಿ ಅಪಾಯದ ಸ್ಥಳಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜನಸಂದಣಿ ಉಂಟಾಗದಂತೆ ಪೋಲಿಸ್ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್, ಮೈಸೂರು ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿ ಸಿ ಪಿ ಬಿಂದುಮಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Mysore dasara, precautions, DC, Lakshmikanta Reddy