ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ: ಅಧ್ಯಕ್ಷರಾಗಿ ಸಿಎಂ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿಕೆಶಿ

ಬೆಂಗಳೂರು,ಆಗಸ್ಟ್,26,2025 (www.justkannada.in):  ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚನೆ ಮಾಡಿ ಆದೇಶಿಸಿದ್ದು ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ನೇಮಕವಾಗಿದ್ದಾರೆ.

ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ  ಹೊರಡಿಸಿದ್ದಾರೆ.  ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಿಮಿತ್ತ ಸದಸ್ಯರನ್ನಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,  ಕೇಂದ್ರಸಚಿವೆ ಶೋಭಾ ಕರಂದ್ಲಾಜೆ, ಸಚಿವ ರಾಮಲಿಂಗಾರೆಡ್ಡಿ, ಕೆಜೆ ಜಾರ್ಜ್, ಬಿಎಸ್ ಸುರೇಶ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ ನೇಮಕ ಮಾಡಲಾಗಿದೆ.

ಹಾಗೆಯೇ ಸಚಿವ ಜಮೀರ್ ಅಹ್ಮದ್ ಖಾನ್, ಸಂಸದರಾದ ಡಾ.ಸಿಎನ್ ಮಂಜುನಾಥ್, ಪಿ.ಸಿ ಮೋಹನ್, ತೇಜಸ್ವಿ ಸೂರ್ಯ, ರಾಜ್ಯಸಭಾ ಸದಸ್ಯ ನಾರಾಯಣ ನಟ ಜಗ್ಗೇಶ್ ಸೇರಿ  ಹಲವರನ್ನ ನೇಮಿಸಲಾಗಿದೆ.

Key words: Greater Bangalore Authority, CM Siddaramaiah, President, DK Shivakumar, Vice President