ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು

ಮಂಡ್ಯ ,ಆಗಸ್ಟ್,28,2025 (www.justkannada.in): ನಿನ್ನೆ ಗಣೇಶ ಹಬ್ಬ ಸಂಭ್ರಮದಿಂದ ಜರುಗಿದ್ದು ಈ ಮಧ್ಯೆ  ಗಣೇಶ ವಿಸರ್ಜನೆಯ ವೇಳೆ ನೀರಿನಲ್ಲಿ ಮುಳುಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದೆ.

ಯರವಳ್ಳಿಯ ಪ್ರದೀಪ್ (28) ಮೃತ ಯುವಕ. ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಈ ಘಟನೆ ನಡೆದಿದೆ. ನೀರಿನಲ್ಲಿ ಮುಳುಗಿ ಪ್ರದೀಪ್ (28) ಸಾವನ್ನಪ್ಪಿದ್ದಾನೆ. ಕೂಡಲೇ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿಗಳು ಪ್ರದೀಪ್ ಮೃತದೇಹವನ್ನು ಹೊರಗಡೆ ತೆಗೆದಿದ್ದಾರೆ.

ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Youth, dies, drowning, Ganesha,  immersion