ಮಂಡ್ಯ, ಸೆಪ್ಟೆಂಬರ್,1,2025 (www.justkannada.in): ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ್ ಮೃತ ವ್ಯಕ್ತಿ. ಕೆ.ಆರ್.ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಘಟನೆ ನಡೆದಿದೆ. ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಯುವಕರ ಜೊತೆ ಡಿಜೆ ಹಾಡಿಗೆ ಮಂಜುನಾಥ್ ಭರ್ಜರಿ ಹೆಜ್ಜೆ ಹಾಕುತ್ತಿದ್ದರು. ಆದರೆ ಹಠಾತ್ ಹೃದಯಾಘಾತದಿಂದ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜುನಾಥ್ ಅವರ ಕೊನೆಯ ಕ್ಷಣದ ದೃಶ್ಯಗಳು ಸ್ಥಳೀಯರ ಮೊಬೈಲ್ನಲ್ಲಿ ಸೆರೆ ಆಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಾಗವಲ್ಲಿ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ವ್ಯಕ್ತಿಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಲಕ್ಷ್ಮಿಪತಿ (40) ಮೃತಪಟ್ಟ ವ್ಯಕ್ತಿ.
ಗಣೇಶ ವಿಸರ್ಜನೆ ಹಿನ್ನಲೆ ಗ್ರಾಮಸ್ಥರು ಡ್ಯಾನ್ಸ್ ಮಾಡುತ್ತಿದ್ದರು. ಲಕ್ಷ್ಮಿಪತಿ ಕೂಡ ಡ್ಯಾನ್ಸ್ ಮಾಡುತ್ತಿದ್ದು, ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ.
Key words: Man, dies, heart attack, dancing