ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ

ಬೆಂಗಳೂರು,ಸೆಪ್ಟಂಬರ್, 2,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿ ಪವಿತ್ರಾಗೌಡರ ಜಾಮೀನು ಆರ್ಜಿಯನ್ನ 57ನೇ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ.

ಪ್ರಕರಣ ಸಂಬಂಧ ಜೈಲಿನಲ್ಲಿರುವ ಪವಿತ್ರಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ಐಪಿ ನಾಯ್ಕ್ ಅವರು ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ.

ಅಸ್ತಿತ್ವದಲ್ಲಿಲ್ಲದ ಕಾನೂನಿನಡಿ ಬಂಧನ ಮಾಡಲಾಗಿದೆ ಎಂದು  ಪವಿತ್ರಾಗೌಡ ಪರ ವಕೀಲರು ವಾದ ಮಂಡಿಸಿದ್ದರು.  ಯಾವುದೇ ಕಾರಣಕ್ಕೂ ಬೇಲ್ ನೀಡಬಾರದು ಎಂದು ಸರ್ಕಾರಿ ವಕೀಲರು ವಾದಿಸಿದ್ದರು.

ಈ ನಡುವೆ ಕಳೆದ ವರ್ಷ ಡಿಸೆಂಬರ್ ನಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಜಾಮೀನು ರದ್ದುಕೋರಿ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ 7 ಆರೋಪಿಗಳ ಜಾಮೀನನ್ನ ರದ್ದು ಮಾಡಿತ್ತು.

Key words: Renukaswamy murder case,  Pavitra Gowda, bail application, dismissed