ಮೈಸೂರು,ಸೆಪ್ಟಂಬರ್,3,2025 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಮೈಸೂರು ಜಿಲ್ಲಾಡಳಿತ ವತಿಯಿಂದ ಇಂದು ಅಧಿಕೃತ ಆಹ್ವಾನ ನೀಡಲಾಯಿತು.
ಇಂದು ಸರ್ಕಾರದ ಪರವಾಗಿ ದಸರಾ ವಿಶೇಷಾಧಿಕಾರಿಯೂ ಆಗಿರುವ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು ಹಾಸನದ ಬಾನು ಮುಷ್ತಾಕ್ ಅವರ ನಿವಾಸಕ್ಕೆ ತೆರಳಿ ಅಧಿಕೃತವಾಗಿ ಆಹ್ವಾನಿಸಿದರು.
ಸಾಹಿತಿ ಬಾನು ಮುಷ್ತಾಕ್ ಅವರಿಗೆ ಶಾಲು ಹೊದಿಸಿ, ಪೇಟ ತೊಡಿಸಿ ದಸರಾ ಉದ್ಘಾಟನೆಗೆ ಅಧಿಕೃತ ಆಹ್ವಾನ ನೀಡಲಾಯಿತು. ಸೆಪ್ಟಂಬರ್ 22 ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಮಹೋತ್ಸವವನ್ನು ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ.
ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಮತ್ತು ಸ್ವಾಗತ ಸಮಿತಿಯವರು ಪಾಲ್ಗೊಂಡಿದ್ದರು.
Key words: Mysore Dasara, inauguration, Official invitation, Banu Mushtaq