Saturday, October 24, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Front Page GST ಪರಿಷ್ಕರಣೆ: ಯಾವುದಕ್ಕೆ ವಿನಾಯಿತಿ ? ಇಲ್ಲಿದೆ ನೋಡಿ ಮಾಹಿತಿ

GST ಪರಿಷ್ಕರಣೆ: ಯಾವುದಕ್ಕೆ ವಿನಾಯಿತಿ ? ಇಲ್ಲಿದೆ ನೋಡಿ ಮಾಹಿತಿ

ನವದೆಹಲಿ, ಸೆಪ್ಟೆಂಬರ್ 4,2025 (www.justkannada.in): ಕೇಂದ್ರ ಸರ್ಕಾರ  ಸರಕು ಮತ್ತು ಸೇವಾ ತೆರಿಗೆ(GST) ಪದ್ದತಿಯ ಸಂಪೂರ್ಣ ಪರಿಷ್ಕರಣೆ ಮಾಡಿದ್ದು  ಹಲವು ವಸ್ತುಗಳ ಜಿಎಸ್‌ಟಿ (GST) ದರ ಇಳಿಸುವ ಮೂಲಕ ದೇಶದ ಜನರಿಗೆ ದೀಪಾವಳಿ ಉಡುಗೊರೆ ನೀಡಿದೆ.

ಹೌದು ಕೇಂದ್ರ ಸರ್ಕಾರ ಜಿಎಸ್​ಟಿ ಪರಿಷ್ಕರಣೆ ಮಾಡಿದ್ದು, ಶೇ 12 ಮತ್ತು ಶೇ 28ರ ಸ್ಲ್ಯಾಬ್​ಗಳನ್ನು ರದ್ದು ಮಾಡಲಾಗಿದೆ. ಶೇ 5 ಮತ್ತು ಶೇ 18ರ ತೆರಿಗೆ ಸ್ಲ್ಯಾಬ್‌ ಗಳನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರಿಂದ ಅನೇಕ ವಸ್ತುಗಳ ಬೆಲೆ ಇಳಿಕೆಯಾಗುತ್ತಿದೆ. ಹಾಗೆಯೇ ಕೆಲವು ವಸ್ತುಗಳಿಗೆ ಜಿಎಸ್​ಟಿಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಅಂದರೆ, ಶೂನ್ಯ ತೆರಿಗೆ ಅಡಿ ತರಲಾಗಿದೆ. ಹೀಗಾಗಿ ಆ ವಸ್ತುಗಳಿಗೆ ತೆರಿಗೆ ಪಾವತಿಸುವ ಅಗತ್ಯವೇ ಇರುವುದಿಲ್ಲ.

ಯುಎಚ್​ಟಿ ಮಿಲ್ಕ್, ಪ್ಯಾಕ್ ಮಾಡಿದ ಚೆನ್ನಾ, ಪನ್ನೀರ್, ಇಂಡಿಯನ್ ಬ್ರೆಡ್ಸ್, ರೋಟಿ, ಕಾಕ್ರಾ, ಚಪಾತಿ, ಪರೋಟ, ಪಿಜ್ಜಾ ಹಾಗೂ ಬ್ರೆಡ್ ಇವಗಳು ಈವರೆಗೆ ಶೇ 5 ರ ಜಿಎಸ್​ಟಿ ಸ್ಲ್ಯಾಬ್​​ ಅಡಿ ಬರುತ್ತಿದ್ದವು. ಈ ವಸ್ತುಗಳಿಗೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.

ಆಹಾರ ವಸ್ತುಗಳು ಮಾತ್ರವಲ್ಲದೆ, ಮಕ್ಕಳ ಕಲಿಕಾಸಾಮಗ್ರಿಗಳ ಮೇವಿನ ಜಿಎಸ್‌ಟಿಯನ್ನೂ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಮ್ಯಾಪ್ಸ್, ಚಾರ್ಟ್ಸ್ ಮತ್ತು ಗ್ಲೋಬ್ಸ್, ಪೆನ್ಸಿಲ್ಸ್, ಶಾರ್ಪರ್ನರ್ಸ್, ಎರೇಸರ್, ಕ್ರಯನ್ಸ್, ಮತ್ತು ಪ್ಯಾಸ್ಟೆಲ್‌ ಗಳು, ಎಕ್ಸರ್‌ ಸೈಸ್‌ ಬುಕ್ಸ್ ಮತ್ತು ನೋಟ್ ಪುಸ್ತಕಗಳು ಇವುಗಳ ಮೇಲೆ ಮೊದಲು ಶೇ 12ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಇದನ್ನು ಸಂಪೂರ್ಣ ತೆರವು ಮಾಡಲಾಗಿದ್ದು, ಇನ್ಮುಂದೆ ಶೂನ್ಯ ತೆರಿಗೆ ವ್ಯಾಪ್ತಿಗೆ ಬರಲಿವೆ.

ವೈಯಕ್ತಿಕ ವಿಮೆ ಮತ್ತು ಆರೋಗ್ಯ ವಿಮೆ ಮೇಲಿನ ಶೇ 18ರ ಜಿಎಸ್‌ಟಿಯನ್ನು ಶೂನ್ಯಕ್ಕೆ ಇಳಿಕೆ ಮಾಡಲಾಗಿದ್ದು, ವೈಯಕ್ತಿಕ ಜೀವವಿಮೆ ಮತ್ತು ಆರೋಗ್ಯ ವಿಮೆಗೆ ಕೇಂದ್ರಸರ್ಕಾರ ಬಹುದೊಡ್ಡ ರಿಯಾಯಿತಿ ನೀಡಿದೆ. ಕೆಲ ಐಷಾರಾಮಿ ವಸ್ತುಗಳ ಮೇಲೆ ಭಾರಿ ತೆರಿಗೆ ವಿಧಿಸುವ ಮೂಲಕ ತೆರಿಗೆ ಸಂಗ್ರಹಕ್ಕೂ ಸರ್ಕಾರ ಮುಂದಾಗಿದ್ದು, ಈವರೆಗೆ ಶೇಕಡಾ 28ರಷ್ಟು ತೆರಿಗೆ ವ್ಯಾಪ್ತಿಯಲ್ಲಿ ಬರುತ್ತಿದ್ದ ಐಷಾರಾಮಿ ವಸ್ತುಗಳಿಗೆ ಇನ್ಮುಂದೆ ಶೇ 40 ರ ಜಿಎಸ್ ​ಟಿ ಪಾವತಿಸಬೇಕಾಗಲಿದೆ.

ಪ್ಲೈಟ್, ಹೆಲಿಕಾಪ್ಟರ್, ಐಷಾರಾಮಿ ಕಾರುಗಳು, 1500 ಸಿಸಿಗಿಂತ ಹೆಚ್ಚು, 4,000 ಮಿ.ಮೀ ಉದ್ದವಿರುವ ಕಾರುಗಳು, 350 ಸಿಸಿಗಿಂತ ಹೆಚ್ಚಿನ ಸಾಮರ್ಥ್ಯದ ಬೈಕ್​ಗಳ ದರಗಳು ಇನ್ನಷ್ಟು ದುಬಾರಿಯಾಗಲಿವೆ. ಖಾಸಗಿ ವಿಮಾನ, ಹೆಲಿಕಾಪ್ಟರ್ ಬಳಕೆ, ಮನರಂಜನೆಗೆ ದೋಣಿ, ಇತರ ಹಡಗುಗಳ ಬಳಕೆ, ಹೆಚ್ಚು ಸಾಮರ್ಥ್ಯದ ರಿವಾಲ್ವಾರ್, ಪಿಸ್ತೂಲ್​ಗಳ ಮೇಲೆ ಶೇ 40 ರ ಸ್ಲ್ಯಾಬ್ ಇರಲಿದೆ.

ಜೊತೆಗೆ ಸಿಗರೇಟ್, ಸಿಗಾರ್, ಪಾನ್ ಮಸಾಲ, ಜರ್ದಾ, ಬೀಡಿ, ತಂಬಾಕು, ಜಗಿಯುವ ವಸ್ತುಗಳು ಇನ್ಮುಂದೆ 40 ಪರ್ಸೆಂಟ್ ಜಿಎಸ್​ಟಿ ಅಡಿಯಲ್ಲಿ ಬರುತ್ತವೆ. ಅಧಿಕ ಸಕ್ಕರೆ ಅಂಶ ಇರುವ ಪಾನೀಯಗಳು, ಸೋಡಾ, ಕೂಲ್ ಡ್ರಿಂಕ್ಸ್, ಹಣ್ಣಿನ ಕಾರ್ಬೊನೇಟೆಡ್ ಪಾನಿಯಗಳು, ಕೆಫೀನ್ ಹೊಂದಿರುವ ಪಾನಿಯಗಳ ಮೇಲೆ ಶೇ 40ರಷ್ಟು ತೆರಿಗೆ ಬೀಳಲಿದೆ. ಸೆಪ್ಟಂಬರ್ 22 ರಿಂದ ಹೊಸ ಜಿಎಸ್ ಟಿ ಪದ್ದತಿ ಜಾರಿಗೆ ಬರಲಿದೆ.

Key words: GST, revision, Central Government