ಮೈಸೂರು,ಸೆಪ್ಟಂಬರ್,4,2025 (www.justkannada.in): ಸೆಪ್ಟಂಬರ್ 22 ರಂದು ನಡೆಯಲಿರುವ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಅವರಿಗೆ ಜಿಲ್ಲಾಡಳಿತದ ವತಿಯಿಂದ ಅಧಿಕೃತ ಆಹ್ವಾನ ನೀಡಲಾಯಿತು.
ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಅವರನ್ನು ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಜಿಲ್ಲಾಡಳಿತದ ವತಿಯಿಂದ ಇಂದು ಬೆಂಗಳೂರಿನ ಸಚಿವರ ನಿವಾಸದಲ್ಲಿ ಅಧಿಕೃತ ಆಹ್ವಾನ ನೀಡಲಾಯಿತು. ಇದೇ ವೇಳೆ ಸಚಿವರು ಯುವ ಸಂಭ್ರಮ ಪೋಸ್ಟರ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ದಸರಾ ವಿಶೇಷಾಧಿಕಾರಿಯೂ ಆದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಮಹಾನಗರ ಪಾಲಿಕೆ ಆಯುಕ್ತರಾದ ಶೇಕ್ ತನ್ವಿರ್ ಆಸಿಫ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಮತ್ತು ಸ್ವಾಗತ ಸಮಿತಿಯವರು ಉಪಸ್ಥಿತರಿದ್ದರು.
ಸಿಎಂ ಸಿದ್ದರಾಮಯ್ಯಗೆ ಅಧಿಕೃತ ಆಹ್ವಾನ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪರ ನೇತೃತ್ವದಲ್ಲಿ ಜಿಲ್ಲಾಡಳಿತದ ವತಿಯಿಂದ ಇಂದು ಆಹ್ವಾನ ನೀಡಲಾಯಿತು.
ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗೆ ಫಲಪುಷ್ಪ ನೀಡಿ ರೇಷ್ಮೆ ಶಾಲು, ಹಾರ ಹಾಕಿ ಆಹ್ವಾನ ಪತ್ರಿಕೆ ನೀಡಿ ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಆಮಂತ್ರಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ್, ಜಿಪಂ ಸಿಇಓ ಎಸ್.ಯುಕೇಶ್ ಕುಮಾರ್, ಚಾಮುಂಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Key words: Mysore Dasara, inauguration, Official invitation, CM, ministers