ಬೆಂಗಳೂರು,ಸೆಪ್ಟಂಬರ್,4,2025 (www.justkannada.in): ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ EVM ಬದಲು ಬ್ಯಾಲೆಟ್ ಪೇಪರ್ ಬಳಕೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಕಾನೂನು ಇಲಾಖೆ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.
ಇಂದು ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್, ಮುಂಬರುವ ಸ್ಥಳಿಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಲು ನಿರ್ಧರಿಸಲಾಗಿದೆ. ಈ ಕುರಿತು ಅನುಮೋದನೆ ನೀಡಲಾಗಿದೆ ಎಂದರು.
ಇತ್ತೀಚಿಗೆ ಮತದಾರರ ಪಟ್ಟಿ ತಯಾರಿಕೆಯಲ್ಲಿ ಬದಲಾವಣೆಯಾಗುತ್ತಿದೆ. ದೊಡ್ಡ ಪ್ರಮಾಣದಲ್ಲಿ ಇಲ್ಲದವರ ಹೆಸರು ಸೇರಿಸಲಾಗಿದೆ. ಮತಗಳ್ಳತನ ಚರ್ಚೆ ಮಾತು ನಡೆದಿದೆ. ಇವಿಎಂ ಬಗ್ಗೆ ಜನರಲ್ಲಿ ವಿಶ್ವಾಸಾರ್ಹತೆ ಕಡಿಮೆ ಆಗುತ್ತಿದೆ. ಹೀಗಾಗಿ ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್ ಬಳಕೆಗೆ ತೀರ್ಮಾನಿಸಲಾಗಿದೆ ಎಂದು ಹೆಚ್ ಕೆ ಪಾಟೀಲ್ ತಿಳಿಸಿದರು.
Key words: ballot papers, local body, elections, Minister, H.K. Patil