ಮೈಸೂರು,ಸೆಪ್ಟಂಬರ್,5,2025 (www.justkannada.in): ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ (ಎಲೆಕ್ಟ್ರಾನಿಕ್ ವೋಟಿಂಗ್ ಮಿಷಿನ್)ಗೆ ಬದಲಾಗಿ ಬ್ಯಾಲೆಟ್ ಮತಪತ್ರಗಳನ್ನೇ ಬಳಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರಕಾರ ಕೈಗೊಂಡಿರುವುದು ಅತ್ಯಂತ ಶ್ಲಾಘನೀಯ ಎಂದು ಕಾಂಗ್ರೆಸ್ ಮುಖಂಡ ಕೆ.ವಿ. ಮಲ್ಲೇಶ್ ಮೆಚ್ಚುಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಕೆ.ವಿ ಮಲ್ಲೇಶ್, ಇತ್ತೀಚಿನ ದಿನಗಳಲ್ಲಿ ಇವಿಎಂಗಳ ಕಾರ್ಯ ದಕ್ಷತೆಯ ಮೇಲೆ ಸಾಕಷ್ಟು ಅನುಮಾನಗಳು ಮೂಡಿವೆ. ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಬ್ಯಾಲೆಟ್ ಪೇಪರ್‌ಗಳನ್ನೇ ಬಳಸಲು ಮುಂದಾಗುತ್ತಿರುವುದು ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸುವ ನಡೆಯಾಗಿದೆ. ಅಮೆರಿಕದಂತಹ ಮುಂದುವರಿದ ದೇಶವೇ ಇಂದಿಗೂ ಮತಪತ್ರಗಳನ್ನು ಬಳಸುತ್ತಿದೆ. ಆದರೆ, ಭಾರತದಲ್ಲಿ ಮಾತ್ರ ಮತ ಎಣಿಕೆಯ ನೆಪವೊಡ್ಡಿ ಇವಿಎಂ ಬಳಸುತ್ತಿರುವುದು ಸರಿಯಲ್ಲ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಮಾದರಿಯಾಗಿ ಪರಿಗಣಿಸಿ ಎಲ್ಲ ಚುನಾವಣೆಗಳಲ್ಲೂ ಮತಪತ್ರಗಳನ್ನೇ ಬಳಸುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಜನಸಾಮಾನ್ಯರಿಗೆ ಮತ ಚಲಾವಣೆ ಸಂದರ್ಭದಲ್ಲಿ ಇವಿಎಂಗಿಂತ ಬ್ಯಾಲೆಟ್ ಪೇಪರ್ ಮೂಲಕ ಮತ ಹಾಕುವುದು ಹೆಚ್ಚು ಪಾರದರ್ಶಕವಾಗಿದೆ. ತಾವೇ ಮತ ಗುರುತು ಹಾಕುವುದರಿಂದ ಇಲ್ಲಿ ಯಾವುದೇ ಅನುಮಾನ, ಗೊಂದಲಗಳಿರುವುದಿಲ್ಲ. ಹಾಗಾಗಿ ರಾಜ್ಯ ಸರ್ಕಾರ ಬ್ಯಾಲೆಟ್ ಪೇಪರ್‌ಗೆ ಒಲವು ತೋರಿರುವುದು ಸ್ವಾಗತಾರ್ಹವಾಗಿದೆ ಎಂದರು.
Key words: Use, ballot paper, KV Mallesh, praises, government