ನವದೆಹಲಿ, ಸೆಪ್ಟಂಬರ್,9,2025 (www.justkannada.in): ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಮತದಾನ ಮಾಡಿದ್ದಾರೆ.
ಇಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸಂಸತ್ ಭವನದಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮತ ಎಣಿಕೆ ಸಂಜೆ 6 ಗಂಟೆಗೆ ಆರಂಭವಾಗಿ ನಂತರ, ಫಲಿತಾಂಶ ಪ್ರಕಟವಾಗಲಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ ಮೊದಲು ಮತದಾನದ ಹಕ್ಕು ಚಲಾಯಿಸಿದರು. ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ಸಿ.ಪಿ ರಾಧಾಕೃಷ್ಣನ್ ಮತ್ತು ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಬಿ ಸುದರ್ಶನ್ ರೆಡ್ಡಿ ಕಣದಲ್ಲಿದ್ದಾರೆ.
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 788 ಸದಸ್ಯರು ಮತದಾರರಿದ್ದಾರೆ. ರಾಜ್ಯಸಭೆಯಿಂದ 245 ಮತ್ತು ಲೋಕಸಭೆಯಿಂದ 543. ರಾಜ್ಯಸಭೆಯ 12 ನಾಮನಿರ್ದೇಶಿತ ಸದಸ್ಯರು ಸಹ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ.
Key words: Election, Vice President, Voting, PM, Modi