ಬೆಂಗಳೂರು,ಸೆಪ್ಟಂಬರ್,11,2025 (www.justkannada.in): ನಟ ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಅವರೇ ಪ್ರಮುಖಪಾತ್ರದಲ್ಲಿ ನಟಿಸಿರುವ “ದೈಜಿ” ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಟೀಸರ್ ಬಿಡುಗಡೆ ಮಾಡುವ ಮೂಲಕ “ದೈಜಿ” ಚಿತ್ರತಂಡ ತಮ್ಮ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ರಮೇಶ್ ಅರವಿಂದ್ ಅವರಿಗೆ ನಿರ್ಮಾಪಕ ರವಿ ಕಶ್ಯಪ್ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಟೀಸರ್ ಬಿಡುಗಡೆ ನಂತರ “ದೈಜಿ” ಚಿತ್ರತಂಡದವರು ಮಾಧ್ಯಮದವರ ಜೊತೆಗೆ ಮಾತನಾಡಿದರು. ಈ ಚಿತ್ರದಲ್ಲಿ ವಿದೇಶದ ಪ್ರಸಿದ್ದ ಕಲಾವಿದರೊಂದಿಗೂ ನಟಿಸಿದ್ದೇನೆ. ಆದಷ್ಟು ಬೇಗ “ದೈಜಿ” ಚಿತ್ರವನ್ನು ತೆರೆಯ ಮೇಲೆ ನೋಡಲು ಕಾತುರನಾಗಿದ್ದೇನೆ’ ಎಂದು ನಟ ರಮೇಶ್ ಅರವಿಂದ್ ತಿಳಿಸಿದ್ದಾರೆ.
ಇನ್ನು ಚಿತ್ರವನ್ನ ನಿರ್ದೇಶಕ ಆಕಾಶ್ ಶ್ರೀವತ್ಸ ನಿರ್ದೇಶಿಸಿದ್ದಾರೆ. ಭೂಮಿ ಪಾತ್ರದಲ್ಲಿ ನಟಿಸಿರುವುದಾಗಿ ನಟಿ ರಾಧಿಕಾ ನಾರಾಯಣ್ ಹಾಗೂ ಗಗನ್ ಪಾತ್ರದಲ್ಲಿ ಅಭಿನಯಿಸಿರುವಿದಾಗಿ ದಿಗಂತ್ ತಿಳಿಸಿದರು. ಚಿತ್ರದಲ್ಲಿ ನಟಿಸಿರುವ ಬಿ.ಎಂ.ಗಿರಿರಾಜ್, ಬರಹಗಾರ ಅಭಿಜಿತ್ ಹಾಗೂ ಕಾಸ್ಟಿಂಗ್ ಡೈರೆಕ್ಟರ್ ಸುನಯನ ಸುರೇಶ್ ಮುಂತಾದರ “ದೈಜಿ” ಬಗ್ಗೆ ಮಾತನಾಡಿದರು. ಶ್ರೀಶ ಕುದುವಳ್ಳಿ ಛಾಯಾಗ್ರಹಣ, ಜ್ಯೂಡಾ ಸ್ಯಾಂಡಿ ಸಂಕಲನವಿರುವ ಈ ಚಿತ್ರಕ್ಕೆ ಆಕಾಶ್ ಶ್ರೀವತ್ಸ ಅವರೆ ಸಂಕಲನ ಕಾರ್ಯ ಮಾಡಿದ್ದಾರೆ.
Key words: Birthday, actor, Ramesh Aravind, Teaser, Daiji