ಹಸೆಮಣೆ ಏರಬೇಕಿದ್ದ ಜೋಡಿ  ಅಪಘಾತದಲ್ಲಿ ದುರ್ಮರಣ

ಶಿವಮೊಗ್ಗ, ಸೆಪ್ಟೆಂಬರ್, 11,2025 (www.justkannada.in):  ಕೆಲವು ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಬೈಕ್ ಮತ್ತು ಒಮ್ನಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್​ ನಲ್ಲಿ ಈ ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಮಟ್ಟಿಕೋಟೆ ಗ್ರಾಮದ ರೇಖಾ (20) ಮತ್ತು ಗಂಗೊಳ್ಳಿ ಗ್ರಾಮದ ಬಸವನಗೌಡ ದ್ಯಾಮನಗೌಡ್ರ (25) ಮೃತಪಟ್ಟವರು.

ಆಗಸ್ಟ್  ನಲ್ಲಿ ರೇಖಾ, ಬಸವನಗೌಡ ನಿಶ್ಚಿತಾರ್ಥವಾಗಿತ್ತು. ಮಳೆಯ ಕಾರಣಕ್ಕೆ ಮದುವೆಯನ್ನು ಮುಂದೂಡಿದ್ದ 2 ಕುಟುಂಬಸ್ಥರು, ಡಿಸೆಂಬರ್ ​​ನಲ್ಲಿ ಇಬ್ಬರ ಮದುವೆಗೆ ದಿನಾಂಕ ನಿಗದಿ ಮಾಡಿದ್ದರು.  ಈ ಮಧ್ಯೆ ಜೋಡಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಓಮ್ನಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ಈ ಕುರಿತು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: accident, Bike, Shimoga,  couple, death