ರಾಜ್ಯದಲ್ಲಿ 882 ಕೋಟಿ ರೂ. ವೆಚ್ಚದಲ್ಲಿ ಹೊಸೊಡಾದ ಸೌರಕೋಶ ತಯಾರಿಕಾ ಘಟಕ-ಸಚಿವ  ಎಂ. ಬಿ. ಪಾಟೀಲ್

ಬೆಂಗಳೂರು,ಸೆಪ್ಟಂಬರ್,12,2025 (www.justkannada.in):  ರಾಜ್ಯದಲ್ಲಿ   ಅಂದಾಜು 882 ಕೋಟಿ ರೂ. ವೆಚ್ಚದಲ್ಲಿ ಸೌರ ಕೋಶ ತಯಾರಿಸುವ ಘಟಕ ಸ್ಥಾಪಿಸುವುದನ್ನು ಜಪಾನಿನ ಹೊಸೊಡಾ ಹೋಲ್ಡಿಂಗ್ಸ್‌ ಖಚಿತಪಡಿಸಿದೆʼ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್  ಅವರು ತಿಳಿಸಿದ್ದಾರೆ.

ʼತೋಂಗ್‌ ತರ್‌ ಎನರ್ಜಿ ಸೊಲುಷನ್ಸ್‌ (ಟಿಟಿಇಎಸ್‌) ಸಹಯೋಗದಲ್ಲಿ ಈ ಯೋಜನೆ ಕಾರ್ಯಗತಗೊಳ್ಳಲಿದೆ. ಆರಂಭದಲ್ಲಿ ಟಿಟಿಇಎಸ್‌  ಈ ಯೋಜನೆಗೆ  490 ಕೋಟಿ ರೂ. ವೆಚ್ಚ ಮಾಡಲು ನಿರ್ಧರಿಸಿತ್ತು.  ಫೆಬ್ರವರಿಯಲ್ಲಿ ನಡೆದಿದ್ದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಯೋಜನೆಯ ಒಪ್ಪಂದಕ್ಕೆ ಅಂಕಿತ ಹಾಕಲಾಗಿತ್ತು.

ಟಿಟಿಇಎಸ್‌ ಜೊತೆಗಿನ  ಪಾಲುದಾರಿಕೆ ಫಲವಾಗಿ ಈ ಯೋಜನೆಯ ಹೂಡಿಕೆ ಮೊತ್ತವನ್ನು ಹೊಸೊಡಾ ಹೋಲ್ಡಿಂಗ್ಸ್‌ ಹೆಚ್ಚಿಸಿದೆ. ಇದರಿಂದ ರಾಜ್ಯದಲ್ಲಿ 500 ಜನರಿಗೆ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆʼ ಎಂದು ಸಚಿವ ಎಂ.ಬಿ ಪಾಟೀಲ್ ಮಾಹಿತಿ ನೀಡಿದ್ದಾರೆ.

ಜಪಾನ್‌ಗೆ ಭೇಟಿ ನೀಡಿರುವ ರಾಜ್ಯದ ಉನ್ನತ ಮಟ್ಟದ ನಿಯೋಗದ ನೇತೃತ್ವ ವಹಿಸಿರುವ ಸಚಿವ ಎಂ.ಬಿ ಪಾಟೀಲ್, ಶುಕ್ರವಾರ  ಹೊಸೊಡಾ ಹೋಲ್ಡಿಂಗ್ಸ್‌ ನ ಅಧ್ಯಕ್ಷ ನಕಾಮುರಾ ಸ್ಯಾನ್‌ ಅವರ  ಜೊತೆಗೆ   ನಡೆಸಿದ ಸಮಾಲೋಚನೆಯಲ್ಲಿ ಕಂಪನಿಯು ಈ ಹೂಡಿಕೆ ಹೆಚ್ಚಳವನ್ನು ಖಚಿತಪಡಿಸಿದೆ. ʼಬಂಡವಾಳ ಹೂಡಿಕೆ ಹೆಚ್ಚಿಸುವ ಕಂಪನಿಯ ನಿರ್ಧಾರವು ಸ್ವಾಗತಾರ್ಹವಾಗಿದ್ದು, ಸೌರಶಕ್ತಿ ಉತ್ಪಾದನೆಗೆ ರಾಜ್ಯ ಸರ್ಕಾರ ನೀಡುತ್ತಿರುವ ಆದ್ಯತೆಯನ್ನು ಈ ನಿರ್ಧಾರವು ಸಮರ್ಥಿಸುತ್ತದೆʼ ಎಂದು ಸಚಿವ ಎಂ.ಬಿ ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.

ಕ್ರೀಡಾ ಪರಿಕರಗಳನ್ನು ತಯಾರಿಸುವ ಕರ್ನಾಟಕದಲ್ಲಿನ ತನ್ನ ಘಟಕವು 2027ರ ವೇಳೆಗೆ ಕಾರ್ಯಾರಂಭ ಮಾಡಲಿದೆ ಎಂದು ಜಪಾನಿನ ಇನಾಬತಾ ಕಂಪನಿಯು ಕರ್ನಾಟಕದ ನಿಯೋಗಕ್ಕೆ ಭರವಸೆ ನೀಡಿದೆ.

ತಯಾರಿಕಾ ಘಟಕ ಸ್ಥಾಪನೆಗೆ ಅಗತ್ಯವಾದ ಭೂಮಿ ಸ್ವಾಧೀನ ಹಾಗೂ ಸಂಬಂಧಿತ ಅನುಮೋದನೆಗಳನ್ನು ತ್ವರಿತವಾಗಿ ಒದಗಿಸಲಾಗುವುದು ಎಂದು ನಿಯೋಗವು ಭರವಸೆ ನೀಡಿದೆ.

ಲೋಹದ ಉಪಕರಣ ಬಳಸಿ ನಿರ್ದಿಷ್ಟ ಆಕಾರದಲ್ಲಿ ನಿಖರವಾಗಿ ಕತ್ತರಿಸುವ ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿರುವ (ಎನ್‌ಗ್ರೇವಿಂಗ್‌ ಮತ್ತು ಡೈಕಟಿಂಗ್‌ ಟೆಕ್ನಾಲಜಿ)  ಟೆತ್ಸುಜಿಕವಾ ಕಂಪನಿಯು ರಾಜ್ಯದಲ್ಲಿ ತನ್ನ ತಯಾರಿಕಾ ಚಟುವಟಿಕೆ ವಿಸ್ತರಿಸುವ ಮಾಹಿತಿಯನ್ನು ರಾಜ್ಯದ ನಿಯೋಗದ ಜೊತೆ ಹಂಚಿಕೊಂಡಿದೆ.

ಉನ್ನತ ಮಟ್ಟದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್‌, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ, ಮತ್ತಿತರರು ಇದ್ದಾರೆ.

ENGLISH SUMMARY…

Solar Cell Manufacturing Unit Hosoda to Invest ₹882 Crore in Karnataka: Industries Minister M. B. Patil

Bengaluru: Japan’s Hosoda Holdings will establish a solar cell manufacturing unit in Karnataka at an estimated cost of ₹882 crore, Industries Minister M. B. Patil announced. The project will be implemented in collaboration with Tong Thar Energy Solutions (TTES). Initially, TTES had planned an investment of ₹490 crore. The agreement for the project was signed at the Global Investors Meet in February.

During a meeting with Hosoda Holdings Chairman Nakamura San on Friday, Minister MB Patil Said, The partnership with TTES has increased the total investment, and the project is expected to generate employment for 500 people in the state . Minister Patil confirmed the investment increase and welcomed the company’s decision, noting it aligns with the state government’s focus on solar power generation.

Japanese sports equipment manufacturer Inabata has assured the Karnataka delegation that its unit will start operations by 2027. The delegation also confirmed that necessary land acquisition and approvals will be provided promptly.

Additionally, Tetsujikawa, a company specializing in engraving and die-cutting technology, informed the delegation about plans to expand its manufacturing operations in Karnataka.

The high-level delegation included Dr. S. Selvakumar, Principal Secretary, Industries Department; Commissioner Gunjan Krishna; and other officials.

Key words: Japan, Solar Cell Manufacturing Unit,  Hosoda, Minister, M. B. Patil