ಒಳ ಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಪ್ರತಿಭಟನೆ: ಬಿಜೆಪಿ ಮುಖಂಡರ ವಿರುದ್ಧ FIR

ಬೆಂಗಳೂರು,ಸೆಪ್ಟಂಬರ್,12,2025 (www.justkannada.in):  ಎಸ್ ಸಿ ಒಳಮೀಸಲಾಯಿತಿಯಲ್ಲಿ ಅನ್ಯಾಯ ಖಂಡಿಸಿ ಬಂಜಾರ ಭೋವಿ, ಕೊರಮ, ಕೊರಚ ಸಮುದಾಯದವರು ಫ್ರೀಡಂ ಪಾರ್ಕ್ ನಲ್ಲಿ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಮುಖಂಡರ ವಿರುದ್ದ ಎಫ್ ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಒಳ ಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಸೆಪ್ಟೆಂಬರ್ 10ರಂದು ಫ್ರೀಡಂ ಪಾರ್ಕ್ ನಲ್ಲಿ ಬಂಜಾರ ಭೋವಿ, ಕೊರಮ, ಕೊರಚ ಸಮುದಾಯದವರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ಸೇರಿದಂತೆ ಹಲವರ ವಿರುದ್ಧ ಉಪ್ಪಾರಪೇಟೆ ಪೊಲೀಸರ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಸೆಪ್ಟಂಬರ್ 10 ರಂದು ಪ್ರತಿಭಟನಾಕಾರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿ ರಸ್ತೆಯಲ್ಲಿ ಹಾಕಿದ್ದ ಬ್ಯಾರಿಕೇಡ್ ಗಳನ್ನ ಕಿತ್ತೆಸೆದು ಆಕ್ರೋಶ ಹೊರ ಹಾಕಿದ್ದರು.

Key words: Protest, internal reservation, FIR , against, BJP leaders