ಹಾಸನ ಗಣೇಶ ಮೆರವಣಿಗೆ ದುರಂತ: ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

ಹಾಸನ, ಸೆಪ್ಟೆಂಬರ್​, 13,2025 (www.justkannada.in): ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ  ವೇಳೆ ಟ್ರಕ್ ಹರಿದು ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದು  ಮೃತರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಕುರಿತು  ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ,  ಹಾಸನದಲ್ಲಿ ನಡೆದ ದುರಂತ ಇದೊಂದು ಹೃದಯವಿದ್ರಾವಕ ಘಟನೆ. ದುಃಖಗೊಂಡಿರುವ ಕುಟುಂಬಗಳಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಹಾಗೆಯೇ ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರಿಗೆ ತಲಾ 2 ಲಕ್ಷ ರೂ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

Key words: PM Modi, condoles, Hassan, Truck accident,