ಹಾಸನ ದುರಂತದಲ್ಲಿ ಮೃತಪಟ್ಟವರಿಗೆ 50 ಲಕ್ಷ ರೂ. ಪರಿಹಾರ ಘೋಷಿಸಲಿ- ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು,ಸೆಪ್ಟಂಬರ್,13,2025 (www.justkannada.in):  ಹಾಸನದ ಮೊಸಳೆಹೊಸಳ್ಳಿಯಲ್ಲಿ  ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಹರಿದು ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ. ಪರಿಹಾರ ಘೋಷಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ  ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ,  ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿ ಪರಿಹಾರ ಘೋಷಿಸಿದ್ದಾರೆ. ಸರ್ಕಾರ 50 ಲಕ್ಷ ಪರಿಹಾರ ಘೋಷಿಸಲಿ. ವಿಷಯ ತಿಳಿದು ಬಹಳ ನೋವಾಗಿದೆ ಮೃತರ ಆತ್ಮಕ್ಕೆ ಶಾಂತಿ ಸಿಗಲಿ  ಎಂದರು.

ಗಣೇಶೋತ್ಸವಕ್ಕೆ ಸರ್ಕಾರ ಅವಕಾಶ ನೀಡುತ್ತಿಲ್ಲ.  ಸರ್ಕಾರ ಅಲ್ಪಸಂಖ್ಯಾತರ ಒಲೈಕೆ ಮಾಡುತ್ತಿದೆ . ಒಲೈಕೆಗಿಂತ  ಅಲ್ಪಸಂಖ್ಯಾತರು ಅಂದರೆ ಭಯ  ಸರ್ವರನ್ನ ಸಮಾನವಾಗಿ ನೋಡಬೇಕು. ಈ ಸರ್ಕಾರ ಹಿಂದೂ ವಿರೋಧಿ ಸರ್ಕಾರ  ಎಂದು ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು.

Key words: Rs 50 lakh, compensation, died , Hassan tragedy, Chalavadi Narayanaswamy