ಹಾಸನಾಂಬ ಜಾತ್ರಾ ಮಹೋತ್ಸವ: ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಬೆಂಗಳೂರು,ಸೆಪ್ಟಂಬರ್,16,2025 (www.justkannada.in): ಅಕ್ಟೋಬರ್ 9ರಿಂದ ಪ್ರಾರಂಭವಾಗುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಹಾಸನ ಜಿಲ್ಲಾಡಳಿತ ವತಿಯಿಂದ ಸಿಎಂ ಸಿದ್ದರಾಮಯ್ಯಗೆ ಆಹ್ವಾನ ನೀಡಲಾಯಿತು.

ಇಂದು ಶಾಸಕ ಶಿವಲಿಂಗೇಗೌಡ, ಹಾಸನ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರು ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಆಹ್ವಾನ ನೀಡಿದರು.

ಹಾಸನಾಂಬೆ ಜಾತ್ರಾ ಮಹೋತ್ಸವವು ಅಕ್ಟೋಬರ್ 9ರಿಂದ 23ರವರೆಗೆ ನಡೆಯಲಿದೆ.

Key words: Hassanamba Jatra Festival, CM, Siddaramaiah, invited