Thursday, November 5, 2026

Dasara Wishes

Happy Dasara
Home Front Page ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಗುಡ್ ನ್ಯೂಸ್: ನಾಳೆ 32 ನೂತನ  ಆ್ಯಂಬುಲೆನ್ಸ್ ಗಳಿಗೆ ಚಾಲನೆ

ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಗುಡ್ ನ್ಯೂಸ್: ನಾಳೆ 32 ನೂತನ  ಆ್ಯಂಬುಲೆನ್ಸ್ ಗಳಿಗೆ ಚಾಲನೆ

ಬೆಂಗಳೂರು,ಸೆಪ್ಟಂಬರ್,16,2025 (www.justkannada.in): ಕಲ್ಯಾಣ ಕರ್ನಾಟಕ ಭಾಗದ ಜನರಿಗೆ  ಸಿಹಿಸುದ್ದಿ ಸಿಕ್ಕಿದ್ದು ನಾಳೆ ಸಿಎಂ ಸಿದ್ದರಾಮಯ್ಯ ಆ ಭಾಗದಲ್ಲಿ 32 ನೂತನ  ಆ್ಯಂಬುಲೆನ್ಸ್ ಗಳಿಗೆ ಚಾಲನೆ ನೀಡಲಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ತುರ್ತು ಆರೋಗ್ಯ ಸೇವೆಗಳನ್ನು ಒದಗಿಸಲು ಹಾಗೂ ಸಕಾಲದಲ್ಲಿ ಚಿಕಿತ್ಸೆಯನ್ನು ಖಾತ್ರಿಪಡಿಸಲು ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ 32 ನೂತನ ಆಂಬುಲೆನ್ಸ್ ಗಳನ್ನು ನಾಳೆ ಜನ ಸೇವೆಗೆ ಅರ್ಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರ ಆರೋಗ್ಯ ಮಟ್ಟ ಸುಧಾರಿಸುವ ಹಲವು ಯೋಜನೆಗಳು ಜಾರಿಗೊಂಡಿದೆ. ಜೊತೆಗೆ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಆಸ್ಪತ್ರೆ, ಕಟ್ಟಡಗಳ ನವೀಕರಣ ಸೇರಿದಂತೆ ಹೊಸ ಆರೋಗ್ಯ ಕೇಂದ್ರಗಳು, ಸಮುದಾಯ ಕೇಂದ್ರಗಳು, ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸುವ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಈ ಮೂಲಕ ಕಲ್ಯಾಣದಲ್ಲಿ ಕಲ್ಯಾಣ ಕಾರ್ಯಗಳು ಆರಂಭಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Key words: Kalyana Karnataka, 32 new ambulances , launched, tomorrow