ಬೆಂಗಳೂರು,ಸೆಪ್ಟಂಬರ್,16,2025 (www.justkannada.in): ವಿಧಾನ ಪರಿಷತ್ ಗೆ ನಾಮನಿರ್ದೇಶನಗೊಂಡಿರುವ ಹಿರಿಯ ಪತ್ರಕರ್ತ ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೆಪ್ಟಂಬರ್ 18 ರಂದು ಅಭಿನಂದನಾ ಸಮಾರಂಭವನ್ನ ಆಯೋಜಿಸಲಾಗಿದೆ.
ಸೆಪ್ಟಂಬರ್ 18 ರಂದು ಬೆಳಿಗ್ಗೆ 11 ಗಂಟೆಗೆ ಕೆಯುಡಬ್ಲ್ಯುಜೆ ಸಭಾಂಗಣದಲ್ಲಿ ಸಮಾರಂಭ ನಡೆಯಲಿದ್ದು ನೂತನ ಪರಿಷತ್ ಸದಸ್ಯ ಶಿವಕುಮಾರ್ ಅವರಿಗೆ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಅವರು ಅಭಿನಂದಿಸಲಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ಶಿವಾನಂದ ತಗಡೂರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಯಾಗಿ ಶಾಸಕ ಜಿ.ಡಿ ಹರೀಶ್ ಗೌಡ ಆಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಸಿ ಲೋಕೇಶ್ ಸೇರಿ ಮತ್ತಿತರರು ಉಪಸ್ಥಿತರಿರಲಿದ್ದಾರೆ.
ಇತ್ತೀಚೆಗೆ ಹಿರಿಯ ಪತ್ರಕರ್ತ ಶಿವಕುಮಾರ್, ರಮೇಶ್ ಬಾಬು, ಆರತಿ ಕೃಷ್ಣ, ಜಕ್ಕಪ್ಪನವರ್ ಅವರನ್ನ ವಿಧಾನಪರಿಷತ್ ಗೆ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿದ್ದು ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Key words: Congratulatory ceremony. MLC, K. Shivakumar, KUWJ