ಮೈಸೂರು,ಸೆಪ್ಟಂಬರ್,17,2025 (www.justkannada.in): ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಅಂಗವಾಗಿ ನಗರದ ಚಾಮುಂಡಿಪುರಂ ನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಪೌರ ಕಾರ್ಮಿಕರಿಗೆ ಬಿಸಿ ಬಿಸಿ ಚಹಾ, ಬನ್ ಬಾಳೆಹಣ್ಣು ವಿತರಿಸಲಾಯಿತು.
ಈ ವೇಳೆ ಶಾಸಕ ಟಿಎಸ್. ಶ್ರೀವತ್ಸ ಮಾತನಾಡಿ ದೇಶದ ಮುಂದಿನ ಭವಿಷ್ಯಕ್ಕಾಗಿ ಆರ್ಥಿಕವಾಗಿ ಭದ್ರ ಬುನಾದಿ ಮತ್ತು ದೇಶದ ಗಡಿಯನ್ನ ಬಲಿಷ್ಠಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಯವರು ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ದೇಶದ ಪ್ರಗತಿಗಾಗಿ ಪೌರಕಾರ್ಮಿಕರ ಸ್ವಚ್ಛತಾ ಕಾರ್ಯ ಸೇವೆ ಪ್ರಮುಖವಾದುದು ಎಂದು ಸ್ಮರಿಸಿದರು
ಈ ಸಂದರ್ಭದಲ್ಲಿ ಮಾಜಿ ನಗರ ಪಾಲಿಕೆ ಸದಸ್ಯ ಮ ವಿ ರಾಮಪ್ರಸಾದ್, ಎಂ ಡಿ ಪಾರ್ಥಸಾರಥಿ, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್, ಉಪಾಧ್ಯಕ್ಷ ಜೋಗಿ ಮಂಜು, ಸ್ಥಳೀಯ ನಗರ ಪಾಲಿಕೆ ಆರೋಗ್ಯ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Key words: PM Modi, birthday, Tea and fruits, distributed, civic worker