ಬೆಂಗಳೂರು, ಸೆಪ್ಟಂಬರ್, 17,2025 (www.justkannada.in): ಯಾವುದೇ ಕಾರಣಕ್ಕೂ ಪಡಿತರ ಕಾರ್ಡ್‌ಗಳನ್ನು ರದ್ದು ಮಾಡುವುದಿಲ್ಲ. ಬಿಪಿಎಲ್ ಹೊಂದಿರುವ ಅನರ್ಹರನ್ನು ಎಪಿಎಲ್ ಪಟ್ಟಿಗೆ ಸೇರಿಸುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆಎಚ್ ಮುನಿಯಪ್ಪ, ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹರನ್ನು ಎಪಿಎಲ್ ಪಟ್ಟಿಗೆ ಸೇರಿಸುತ್ತೇವೆ. ಯಾವುದೇ ಕಾರಣಕ್ಕೂ ಪಡಿತರ ಕಾರ್ಡ್‌ಗಳನ್ನು ರದ್ದು ಮಾಡುವುದಿಲ್ಲ. ಒಂದು ವೇಳೆ ಪರಿಷ್ಕರಣೆಯ ವೇಳೆ ಅರ್ಹರು ತಪ್ಪಿ ಹೋದರೆ ಅರ್ಜಿ ಕೊಡಬಹುದು. ಮತ್ತೆ ಬಿಪಿಎಲ್ ಕಾರ್ಡ್ ಕೊಟ್ಟು ಪಡಿತರ ನೀಡುತ್ತೇವೆ ಎಂದರು.
ಅನರ್ಹ ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆಯಾದ ಬಳಿಕ ಮುಂದಿನ ವರ್ಷ ಬಿಪಿಎಲ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಿ ಅವಕಾಶ ಕಲ್ಪಿಸುವುದಾಗುತ್ತದೆ. ಇಡೀ ದಕ್ಷಿಣ ಭಾರತದಲ್ಲಿ ಅತೀ ಹೆಚ್ಚು ಬಿಪಿಎಲ್ ಕಾರ್ಡ್ ಹೊಂದಿರುವುದು ಕರ್ನಾಟಕ ರಾಜ್ಯ. ಶೇ. 75 ರಷ್ಟು ಮಂದಿ ಬಿಪಿಎಲ್ ಪಟ್ಟಿಯಲ್ಲಿದ್ದಾರೆ. ಇದನ್ನು ಪರಿಷ್ಕರಣೆ ಮಾಡಲೇಬೇಕು ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.
Key words: BPL Card, Revision, APL , Minister, KH Muniyappa