ಇಂದು ನಟ.ದಿ. ವಿಷ್ಣುವರ್ಧನ್ ಹುಟ್ಟುಹಬ್ಬ: ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆಗೆ ಬ್ರೇಕ್

ಬೆಂಗಳೂರು,ಸೆಪ್ಟಂಬರ್18,2025 (www.justkannada.in):  ಇಂದು ನಟ ದಿ. ಸಾಹಸಸಿಂಹ ವಿಷ್ಣುವರ್ಧನ್ ಅವರ ಹುಟ್ಟುಹಬ್ಬವಾಗಿದ್ದು ಆದರೆ ಅಭಿಮಾನ್ ಸ್ಟುಡಿಯೋ ಬಳಿ ಅಭಿಮಾನಿಗಳು ಹುಟ್ಟುಹಬ್ಬ ಸಂಭ್ರಮಾಚರಣೆ ಮಾಡಲು ಬ್ರೇಕ್ ಬಿದ್ದಿದೆ.

ನಟ ವಿಷ್ಣುವರ್ಧನ್  ಹುಟ್ಟುಹಬ್ಬದಂದು ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆಗೆ ಅವಕಾಶ ನೀಡಲು ಹೈಕೋರ್ಟ್ ನಿರಾಕರಿಸಿದೆ. ನ್ಯಾಯಲಯದಿಂದ ಅನುಮತಿ ನೀಡದ ಕಾರಣ ಸಂಭ್ರಮಾಚರಣೆಗೆ ಅವಕಾಶ ನೀಡಲಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಅಭಿಮಾನ್ ಸ್ಟುಡಿಯೋ ಬಳಿ ಭದ್ರತೆ ವಹಿಸಲಾಗಿದೆ. ಅಭಿಮಾನ್ ಸ್ಟುಡಿಯೋ ಗೇಟ್ ಸುತ್ತಾ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ.

ಇನ್ನೂ ಇತ್ತೀಚೆಗೆ ಹೈಕೋರ್ಟ್‌ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿತ್ತು. ಇದಕ್ಕೆ ಡಾ.ವಿಷ್ಣುವರ್ಧನ್ ಅವರ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು.

ಡಾ.ವಿಷ್ಣುವರ್ಧನ್‌ ಅವರಿಗೆ ಇತ್ತೀಚೆಗೆ ಮರಣೋತ್ತರ ‘ಕರ್ನಾಟಕ ರತ್ನ’ಪ್ರಶಸ್ತಿಯನ್ನು ಸರ್ಕಾರ ಘೋಷಣೆ ಮಾಡಿದೆ.

Key words: actor, Vishnuvardhan, birthday, Break, celebrations, Abhiman Studio