ನಟ ದರ್ಶನ್ ಅರ್ಜಿ ವಿಚಾರಣೆ ಸೆ.25ಕ್ಕೆ ಮುಂದೂಡಿಕೆ

ಬೆಂಗಳೂರು,ಸೆಪ್ಟಂಬರ್,19,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಸೌಲಭ್ಯ ಕೋರಿ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಮುಂದೂಡಿಕೆ ಮಾಡಿದೆ.

ಜೈಲಿನಲ್ಲಿ ನಟ  ಸೌಲಭ್ಯ ನೀಡದ ಕುರಿತು ನಟ ದರ್ಶನ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಕುರಿತು ವಿಚಾರಣೆ ನಡೆಸಿದ್ದ57ನೇ ಸಿಸಿಎಚ್ ನ್ಯಾಯಾಲಯ ಇಂದಿಗೆ ವಿಚಾರಣೆಯನ್ನ ಮುಂದೂಡಿಕೆ ಮಾಡಿತ್ತು.

ಇದೀಗ ಇಂದು  ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳಾದ ನಟ ದರ್ಶನ್ ಮತ್ತು  ಪವಿತ್ರಾಗೌಡ ಹಾಜರಾಗಿದ್ದರು.   ದೋಷಾರೋಪ ನಿಗದಿಗೆ ಪವಿತ್ರಾಗೌಡ ಪರ ವಕೀಲರು ಮನವಿ ಮಾಡಿದರು. ನಂತರ ನ್ಯಾಯಾಲಯ ವಿಚಾರಣೆಯನ್ನ ಸೆಪ್ಟಂಬರ್ 25ಕ್ಕೆ ಮುಂದೂಡಿಕೆ ಮಾಡಿದೆ.

Key words: Actor,  Darshan, petition, hearing, postponed ,September 25