ಗದಗ, ಸೆಪ್ಟೆಂಬರ್ 19,2025 (www.justkannada.in): ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ಬಳಿಕ ಬಸ್ ಗೆ ಡಿಕ್ಕಿಯಾಗಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ನಡೆದಿದೆ.
ಕಾರಿನಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಗಳಾದ ಅರ್ಜುನ್ ನೆಲ್ಲೂರ(29) ಮತ್ತು ವೀರೇಶ್ ಉಪ್ಪಾರ(31) ಸೇರಿ ಅರ್ಜುನ್ ಚಿಕ್ಕಪ್ಪ ರವಿ ನೆಲ್ಲೂರ(43) ಮೃತಪಟ್ಟವರು
ಅರ್ಜುನ್ ನೆಲ್ಲೂರ, ವೀರೇಶ್ ಉಪ್ಪಾರ ಮತ್ತು ರವಿ ನೆಲ್ಲೂರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ಬಳಿಕ ಬಸ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಇನ್ನು ಘಟನೆಯಲ್ಲಿ ಮೃತಪಟ್ಟ ಮೂವರ ಪೈಕಿ ಇಬ್ಬರು ಕಾನ್ಸ್ ಟೇಬಲ್ ಗಳಾದ ಅರ್ಜುನ ನೆಲ್ಲೂರ ಮತ್ತು ವೀರೇಶ್ ಉಪ್ಪಾರ ಹಸೆಮಣಿ ಏರಬೇಕಿತ್ತು.
Key words: accident, Three people, die