ಬೆಂಗಳೂರು,ಸೆಪ್ಟಂಬರ್,19,2025 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ 2025 ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ಅರ್ಜಿಯನ್ನ ವಜಾಗೊಳಿಸಿರುವ ಸುಪ್ರೀಂಕೋರ್ಟ್ ಮೈಸೂರು ದಸರಾ ಉದ್ಘಾಟಿಸಲು ಬಾನು ಮುಷ್ತಾಕ್ ಅವರಿಗೆ ಅನುಮತಿ ನೀಡಿದೆ.
ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾ.ಸಂದೀಪ್ ಮೆಹ್ತಾ ಅವರಿದ್ದ ಪೀಠವು ಕರ್ನಾಟಕ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ಸಿ.ಎಂ.ಜೋಶಿ ಅವರಿದ್ದ ನ್ಯಾಯಪೀಠ ವಜಾಗೊಳಿಸಿತ್ತು.
ಹೈಕೋರ್ಟ್ ಆದೇಶ ಪ್ರಶ್ನಿಸಿ ಬೆಂಗಳೂರಿನ ನಿವಾಸಿ ಗೌರವ್ ಎಂಬುವವರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿ ವಜಾಗೊಳಿಸಿದ ನ್ಯಾಯಪೀಠವು , ಯಾವುದೇ ಒಂದು ನಿರ್ದಿಷ್ಟ ಧರ್ಮ ಅಥವಾ ನಂಬಿಕೆಯನ್ನು ಅನುಸರಿಸುವ ವ್ಯಕ್ತಿ ಇತರೆ ಧರ್ಮದ ಹಬ್ಬಗಳಲ್ಲಿ ಆಚರಣೆಯಲ್ಲಿ ಭಾಗಿಯಾಗುವುದರಿಂದ ಸಂವಿಧಾನದಡಿ ಲಭ್ಯವಿರುವ ಯಾವುದೇ ಹಕ್ಕುಗಳು ಉಲ್ಲಂಘನೆಯಾಗುವುದಿಲ್ಲ ಎಂದು ಕೋರ್ಟ್ ವಿಶ್ಲೇಷಣೆ ಮಾಡಿದೆ.
ಸಂವಿಧಾನದ ಪೀಠಿಕೆಯನ್ನು ಒಮ್ಮೆ ಓದಿ ನೋಡಿ. ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆಯುವ ದಸರಾ ಉದ್ಘಾಟನೆಯ ಆಚರಣೆಗಳು ಕೇವಲ ಸಾಂಕೇತಿಕವಲ್ಲ, ಬದಲಾಗಿ ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ರಕ್ಷಿಸಲ್ಪಟ್ಟ ಅತ್ಯಗತ್ಯ ಧಾರ್ಮಿಕ ಆಚರಣೆಯಾಗಿದೆ. ಧಾರ್ಮಿಕ ಚಟುವಟಿಕೆಗಳಿಗೆ ಅದು ಅಡ್ಡಿಯಾಗಬಾರದು ಎಂದು ಅದು ಹೇಳುತ್ತದೆ. ಯಾವುದೇ ಸಾಂವಿಧಾನಿಕ ಅಥವಾ ಕಾನೂನು ಉಲ್ಲಂಘನೆಯಾಗಿದೆ ಎಂಬುದು ಇಲ್ಲಿ ಕಂಡುಬಂದಿಲ್ಲ. ಅದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ ಎಂದು ಪೀಠ ತಿಳಿಸಿತು.
Key words: Dasara inauguration, Supreme Court, Banu Mustak