Saturday, August 8, 2026

BDA Apartments

Home Front Page  ಮೈಸೂರು ದಸರಾ: ಇಂದಿನಿಂದ ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭ

 ಮೈಸೂರು ದಸರಾ: ಇಂದಿನಿಂದ ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭ

ಮೈಸೂರು,ಸೆಪ್ಟಂಬರ್,22,2025 (www.justkannada.in):  ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 2025 ಹಿನ್ನೆಲೆಯಲ್ಲಿ  ಅಂಬಾವಿಲಾಸ ಅರಮನೆಯಲ್ಲಿ ಇಂದಿನಿಂದ ಯದುವಂಶದ ಖಾಸಗಿ ದರ್ಬಾರ್ ಆರಂಭವಾಗಲಿದೆ.

ಇಂದಿನಿಂದ ಸೆಪ್ಟಂಬರ್ 29ರವರೆಗೆ ಖಾಸಗಿ ದರ್ಬಾರ್ ಜರುಗಲಿದ್ದು ರಾಜವಂಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಿಂಹಾಸನವೇರಿ ಧಾರ್ಮಿಕ ವಿಧಿ ವಿಧಾನ ನೆರವೇರಿಸಲಿದ್ದಾರೆ. ರತ್ನ ಖಚಿತ ಸಿಂಹಾಸನವೇರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ.

ಈಗಾಗಲೇ ಸಿಂಹಾಸನವನ್ನ ಅರಮನೆಯ ಸ್ಟ್ರಾಂಗ್ ರೋಮ್ ನಿಂದ ತಂದು ಕನ್ನಡಿ ತೊಟ್ಟಿಯಲ್ಲಿ ಜೋಡಣೆ ಮಾಡಲಾಗಿದ್ದು  5:30 ರಿಂದ 5: 45ರ ಒಳಗೆ ಸಿಂಹಾಸನಕ್ಕೆ ಸಿಂಹ ಜೋಡಣಾ ಕಾರ್ಯ ಮುಕ್ತಾಯವಾಗಿದೆ.

9:55 ರಿಂದ 10 : 15 ರ ಒಳಗೆ ಚಾಮುಂಡಿ ತೊಟ್ಟಿಯಲ್ಲಿ ಯದುವೀರ್ ಹಾಗೂ ತ್ರಿಷಿಕಾ ಕುಮಾರಿ ಒಡೆಯರ್ ರವರಿಗೆ ವಾಣಿವಿಲಾಸ ದೇವರ ಮನೆಯಲ್ಲಿ ಕಂಕಣ ಧಾರಣೆ, ಬೆಳಗ್ಗೆ 11: 35ಕ್ಕೆ ಅರಮನೆಯ ಆವರಣದ ಕೋಡಿ ಸೋಮೇಶ್ವರ ದೇವಾಲಯದ ಬಳಿ ಪಟ್ಟದ ಆನೆ ಹಾಗೂ ಕುದುರೆ, ಹಸು ಸೇರಿದಂತೆ ಕಳಸ ಹೊತ್ತು ಮಹಿಳೆಯರು ಬಂದು ಮಂಗಳವಾದ್ಯದೊಂದಿಗೆ ಸವಾರಿ ತೊಟ್ಟಿಯ ಪೂಜಾ ಕಂಕೈರ್ಯಗಳು ನೆರವೇರಲಿವೆ.

12: 42 ರಿಂದ 12:58 ರ ಒಳಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರತ್ನ ಖಚಿತ ಸಿಂಹಾಸನ ಅಲಂಕರಿಸಲಿದ್ದಾರೆ.  2:05 ರ ಒಳಗೆ ಚಾಮುಂಡೇಶ್ವರಿ ಅಮ್ಮನವರ ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ವಿಜಯ ಯಾತ್ರೆ ನಡೆಯಲಿದೆ.

ಇನ್ನು ಸೆಪ್ಟೆಂಬರ್ 29 ರಂದು ಬೆಳಗ್ಗೆ 10: 10 ರಿಂದ 10:30 ರ ಒಳಗೆ ಒಡೆಯರ್ ಅವರಿಂದ ಸರಸ್ವತಿ ಪೂಜೆ ನೆರವೇರಿಸಲಿದ್ದು ಅಂದು ರಾತ್ರಿ ಖಾಸಗಿ ದರ್ಬಾರ್ ಕೊನೆಕೊಳ್ಳಲಿದೆ.

Key words: Mysore Dasara, Private durbar, palace, today