ಬೆಂಗಳೂರು,ಸೆಪ್ಟಂಬರ್,23,2025 (www.justkannada.in): ಮಲ್ಟಿಫ್ಲೆಕ್ಸ್ ಥಿಯೇಟರ್ ಗಳಲ್ಲಿ ಏಕರೂಪದ ದರ ನಿಗದಿ ಮಾಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮಲ್ಟಿಫ್ಲೆಕ್ಸ್ ಥಿಯೇಟರ್ ಗಳಲ್ಲಿ 200 ರೂ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾ ರವಿ ಹೊಸಮನಿ ಅವರಿದ್ದ ಏಕಸದಸ್ಯ ಪೀಠ ತಡೆ ನೀಡಿದೆ.
ಮಲ್ಟಿಫ್ಲೆಕ್ಸ್ ಗಳಲ್ಲಿ ಅತಿಹೆಚ್ಚು ದರ ನಿಗದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಲ್ಟಿಫ್ಲೆಕ್ಸ್ ಥಿಯೇಟರ್ ಗಳಲ್ಲಿ ಟಿಕೆಟ್ ದರ 200 ರೂ.ಗೆ ನಿಗದಿ ಮಾಡಿ ಆದೇಶ ಹೊರಡಿಸಿತ್ತು. ಇದನ್ನ ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು.
Key words: Cinema, ticket, price, fixed, High Court, stays, government, order