ಜಾತಿಗಣತಿ ಪ್ರಶ್ನಿಸಿ ಸಲ್ಲಿಸಿದ್ದ PIL ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು,ಸೆಪ್ಟಂಬರ್,23,2025 (www.justkannada.in): ರಾಜ್ಯ ಸರ್ಕಾರ ನಡೆಸುತ್ತಿರುವ  ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಪಿಐಎಲ್ ವಿಚಾರಣೆಯನ್ನು ಹೈಕೋರ್ಟ್  ನಾಳೆಗೆ ಮುಂದೂಡಿಕೆ ಮಾಡಿದೆ.

ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ರಾಜ್ಯ ಒಕ್ಕಲಿಗರಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ವೀರಶೈವ ಲಿಂಗಾಯಿತ ಮಹಾಸಭಾ ಸದಸ್ಯರು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

ಈ ಸಂಬಂಧ ವಾದ ಪ್ರತಿವಾದ ಆಲಿಸಿದ ಸಿಜೆ ಬಖ್ರು, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ವಿಚಾರಣೆಯನ್ನ ನಾಳೆಗೆ ಮುಂದೂಡಿಕೆ ಮಾಡಿದೆ. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ವಿವೇಕ್ ರೆಡ್ಡಿ, ಅಂಕಿ ಅಂಶ ಸಂಗ್ರಹಕ್ಕೂ ಪ್ರತ್ಯೇಕ ಕಾಯ್ದೆ ಇದೆ. ಆ ಕಾಯ್ದೆಯಲ್ಲಿ ರಾಜ್ಯಕ್ಕೆ ಅಂಕಿ ಅಂಶ ಸಂಗ್ರಹದ ಅಧಿಕಾರ ನೀಡಲಾಗಿಲ್ಲ. ಹಿಂದೆಂದೂ ಇತರೆ ಧರ್ಮದೊಂದಿಗೆ ಜಾತಿಯನ್ನು ಸೇರಿಸಲಾಗಿರಲಿಲ್ಲ ಎಂದರು.

ರಾಜ್ಯ ಸರ್ಕಾದ ಪರ ವಾದ ಮಂಡಿಸಿದ ವಕೀಲ ಅಭಿಷೇಕ್ ಮನು ಸಿಂಘ್ವಿ, ಇದು ಜಾತಿಗಣತಿಯಲ್ಲ. ಇದು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸರ್ವೆ. ಸರ್ಕಾರದ ನೀತಿ ನಿರೂಪಣೆಗೆ ಪೂರಕವಾಗಿ ಸರ್ವೆಯಾಗಿದೆ. ಸಾಮಾಜಿಕ ಕಲ್ಯಾಣ ಕಾರ್ಯಗಳಿಗೆ ಪೂರಕವಾಗಿ ಸರ್ವೆ ನಡೆಸಲಾಗುತ್ತಿದೆ. ಇದಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಬಾರದೆಂದು ಎಂದು  ಮನವಿ ಮಾಡಿದರು.

Key words: High court, cast census, PIL, Hearing, Adjourned