ರಸ್ತೆಗುಂಡಿ ಮುಚ್ಚಿ ಬಿಜೆಪಿ ಪ್ರತಿಭಟನೆ, ಸರ್ಕಾರದ ವಿರುದ್ದ ಆಕ್ರೋಶ

ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಇಂದು ಬಿಜೆಪಿ  ರಾಜ್ಯಾದ್ಯಂತ 1 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋ ಮುಂದೆ ಬಿಜೆಪಿ ಶಾಸಕ ಕೆ. ಗೋಪಾಲಯ್ಯ ಮತ್ತು ಪಕ್ಷದ ಇತರ ನಾಯಕರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಂಡಿ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದರು.

ರಸ್ತೆ ಗುಂಡಿ ಮುಚ್ಚದ ಕ್ರಮ ಖಂಡಿಸಿ ಬಿಜೆಪಿ ಬೆಂಗಳೂರಿನ ಎಲ್ಲಾ ವಿಧಾನಸಭೆ ಕ್ಷೇತ್ರಗಳಲ್ಲೂ ರಸ್ತೆ ತಡೆದು ಧರಣಿ ನಡೆಸಿತು. ರಸ್ತೆ ಗುಂಡಿ ವಿಚಾರದಲ್ಲಿ ಸಿಎಂ, ಡಿಸಿಎಂ ವರ್ತನೆ ಖಂಡಿಸಿ ಹಾಗೂ ತಕ್ಷಣ ರಸ್ತೆಗಳ ಅಭಿವೃದ್ಧಿಗೆ ಆಗ್ರಹಿಸಿ ಬಿಜೆಪಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 1 ಗಂಟೆಗಳ ಕಾಲ ರಸ್ತೆ ತಡೆಯಲಾಗುತ್ತಿದೆ.

ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ ಬೆಂಗಳೂರಿನ ಯಲಹಂಕ ಓಲ್ಡ್ ಟೌನ್​ನ ಕೆಂಪೇಗೌಡ ವಾರ್ಡ್​ನಲ್ಲಿ ಗುಂಡಿ ಮುಚ್ಚುವ ಮೂಲಕ ಸಾಂಕೇತಿಕವಾಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Key words: BJP, protests, Outrage, against, government